ಸ್ವಾತಂತ್ರ್ಯವು ಹೋರಾಟಗಾರರ ತ್ಯಾಗ, ಬಲಿದಾನದ ಸಂಕೇತ

ಧಾರವಾಡ, ಜು.26: ಇಂದಿನ ಸ್ವಾತಂತ್ರ್ಯ ಫಲ ನಮ್ಮ ಹಿರಿಯರ ತ್ಯಾಗ, ಬಲಿದಾನದ ಸಂಕೇತವಾಗಿದೆ. ಭವಿಷ್ಯದ ಅರಿವು ಮೂಡಬೇಕಾದರೆ, ಇತಿಹಾಸದ ಅವಲೋಕನ ಮಾಡಿಕೊಳ್ಳಬೇಕು ಎಂದು ಗಣಿ, ಭೂ ವಿಜ್ಞಾನ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆಚಾರ ಹಾಲಪ್ಪ ಬಸಪ್ಪ ಅವರು ಹೇಳಿದರು.

ಅವರು ಕೇಂದ್ರ ಸಂವಹನ ಶಾಖೆ ಹಾಗೂ ಕರ್ನಾಟಕ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕ ಇವರ ಸಂಯುಕ್ತಶ್ರಯದಲ್ಲಿ ಇಂದು 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಕೇಂದ್ರ ಸರ್ಕಾರದ 8 ವರ್ಷಗಳ ವಿವಿಧ ಯೋಜನೆಗಳ ಕುರಿತು 3 ದಿನಗಳ ಛಾಯಾಚಿತ್ರ ಪ್ರದರ್ಶನ ಹಾಗೂ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಕೆಸಡಿ ಆವರಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ಕಲಾ ಮಹಾವಿದ್ಯಾಲಯದ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಜಗದೀಶ ಕಿವುಡನವರ ಮಾತನಾಡಿ, ಭಾರತದ ಸ್ವಾತಂತ್ರ್ಯ ಚಳುವಳಿ ಹಾಗೂ ಕರ್ನಾಟಕದ ಏಕೀಕರಣ ಚಳುವಳಿಗೆ ವೇದಿಕೆಯನ್ನು ಕಲ್ಪಿಸಿ ಕೊಟ್ಟದ್ದು ಧಾರವಾಡದ ಪುಣ್ಯಭೂಮಿ. ಭಾರತದ ಚರಿತ್ರೆ ಮಹತ್ವದ್ದಾಗಿದೆ. ಜಗತ್ತಿನಲ್ಲಿ ಪ್ರಬಲ ಹಾಗೂ ಗಟ್ಟಿತನ ಸಂಸ್ಕøತಿ ಎಂದರೆ ಅದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ. ವಿದ್ಯಾರ್ಥಿಗಳು ನಮ್ಮ ದೇಶ, ನಾಡು, ಸಂಸ್ಕೃತಿ, ಭಾμÉ, ಪರಂಪರೆ ಹಾಗೂ ಭಾರತೀಯ ಇತಿಹಾಸದ ಪುಟಗಳನ್ನು ತಿಳಿದುಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಅರವಿಂದ್ ಚಂದ್ರಕಾಂತ ಬೆಲ್ಲದ ಮಾತನಾಡಿ, ಜಗತ್ತಿನಲ್ಲಿ ಅತ್ಯಂತ ಶ್ರೀಮಂತ ರಾಷ್ಟ್ರವಾದ ನಮ್ಮ ಭಾರತ ಬಲಿಷ್ಠವಾಗಿದೆ. ಭಾರತ ದೇಶದಲ್ಲಿ ಏಕತೆ, ವಿಜ್ಞಾನ, ತಂತ್ರಜ್ಞಾನ, ಉತ್ತಮ ಶಿಕ್ಷಣ ವ್ಯವಸ್ಥೆಯನ್ನು ಹೊಂದಿದೆ. ಇತಿಹಾಸದ ಬಗ್ಗೆ ತಿಳಿದುಕೊಂಡರೆ ಮುಂದಿನ ಭವಿಷ್ಯವನ್ನು ಅರಿತುಕೊಳ್ಳಬಹುದು. ಕೇಂದ್ರ ಸರ್ಕಾರ ಹೊಸ ವಿಚಾರ, ಹೊಸ ದಿಕ್ಕುಗಳನ್ನು ದೇಶಕ್ಕೆ ನೀಡುತ್ತಿದೆ ಅದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಅಮೃತ ದೇಸಾಯಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಇಟ್ನಾಳ, ಕರ್ನಾಟಕ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಡಿ. ಬಿ. ಕರಡೋಣಿ, ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಂ.ಸಿ. ಚೌಗಲಾ ಉಪಸ್ಥಿತರಿದ್ದರು.

ಕೇಂದ್ರ ಸಂವಹನ ಶಾಖೆಯ ಕ್ಷೇತ್ರ ಪ್ರಚಾರ ಅಧಿಕಾರಿ ಶೃತಿ ಎಸ್. ಟಿ ಪ್ರಸ್ತಾವಿಕವಾಗಿ ಮಾತನಾಡಿದರು. ಕರ್ನಾಟಕ ಕಲಾ ಮಹಾವಿದ್ಯಾಲಯದ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಸಲೀಮಾಬಿ ಎ. ಕೋಳೂರ ಸ್ವಾಗತಿಸಿದರು. ಕೇಂದ್ರ ಸಂವಹನ ಶಾಖೆಯ ಎಸ್.ಪಿ.ಎ ಮುರಳೀಧರ ಕಾರಭಾರಿ ಕಾರ್ಯಕ್ರಮ ನಿರೂಪಿಸಿದರು.

ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಮಂತ್ರಾಲಯದ ಸಂವಹನ ಶಾಖೆ ಹಾಗೂ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಧಾರವಾಡ ವಲಯ ಸಂಯುಕ್ತವಾಗಿ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ಯ್ರ ಚಳುವಳಿ ಮತ್ತು ಉತ್ತರ ಕರ್ನಾಟಕದ ಪ್ರಮುಖ ಐತಿಹಾಸಿಕ ಸ್ಥಳಗಳ ಕುರಿತು ಮೂರು ದಿನಗಳ ಛಾಯಾಚಿತ್ರ ಪ್ರದರ್ಶನವನ್ನು ಕೆಸಿಡಿ ಗ್ರಂಥಾಲಯ ಕಟ್ಟಡದಲ್ಲಿ ಏರ್ಪಡಿಸಲಾಗಿದೆ.