ಸ್ವಾತಂತ್ರ್ಯ ಅಮೃತ ಮಹೋತ್ಸವ ಪೂರ್ವ ತಯಾರಿ ಸಭೆ

ಜಗಳೂರು.ಆ.೪: ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ವೈವಿಧ್ಯಪೂರ್ಣ ಹಾಗೂ ವಿವಿಧ ಚಟುವಟಿಕೆಗಳ ಮೂಲಕ ಆಯೋಜಿಸುವ ಉದ್ದೇಶದಿಂದ ತಾಲೂಕು ಆಡಳಿತ ಶಾಸಕ ಎಸ್.ವಿ.ರಾಮಚಂದ್ರ ನೇತೃತ್ವದಲ್ಲಿ  ತಾಲೂಕು ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಗಳ ಜೊತೆ ಸಭೆ ಕರೆಯಲಾಗಿತ್ತು.ಈ ಬಾರಿಯ ಸ್ವಾತಂತ್ರ್ಯ ಮಹೋತ್ಸವ ಇಡೀ ದೇಶದಲ್ಲೇ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ತಾಲೂಕಿನಲ್ಲೂ ಅದ್ಧೂರಿಯಾಗಿ ಆಚರಣೆ ಮಾಡಲು ವಿವಿಧ ಇಲಾಖೆಗಳ ಅಧಿಕಾರಿಗಳು ಕೈಜೋಡಿಸಬೇಕು ಎಂದು ಶಾಸಕರು ಸೂಚನೆ ನೀಡಿದರು.ಪಟ್ಟಣದ ಬಯಲು ರಂಗಮಂದಿರದಲ್ಲಿ ಬೃಹತ್ ವೇದಿಕೆ ಸಿದ್ದಪಡಿಸುವುದು ತಾಪಂ ಹಾಗೂ ಪಪಂ ಮುಖ್ಯ ಅಧಿಕಾರಿಗಳ ಹೊಣೆಯಾಗಿದ್ದು ಸುಸಜ್ಜಿತವಾದ ವೇದಿಕೆ ಸಿದ್ದಪಡಿಸುವ ಕುರಿತು ಸಭೆಯಲ್ಲಿ ತೀರ್ಮಾಣ ಕೈಗೊಳ್ಳಲಾಯಿತು.ತಹಶೀಲ್ದಾರ್ ಜಿ.ಸಂತೋಷ್‍ಕುಮಾರ್ ಅತಿಥಿಗಳ ಆಹ್ವಾನ ಪತ್ರಿಕೆ ಮತ್ತು ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳಲು ಸೂಚನೆ ನೀಡಿದರು. ಪ್ರತಿ ಇಲಾಖೆಯ ಸರಕಾರಿ ಕಚೇರಿಗಳನ್ನು ವಿದ್ಯುತ್ ಅಲಂಕಾರ ಮಾಡುವುದು ಆಯಾ ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಸ್ವಚ್ಛತೆ ಮತ್ತು ಕಸ ನಿರ್ವಹಣೆಯು ಪಪಂ ಜವಾಬ್ದಾರಿಯಾಗಿದೆ ಎಂದು ಸೂಚಿಸಿದರು.ಅಂದು ಮಕ್ಕಳಿಗೆ ನೆರಳಿನ ವ್ಯವಸ್ಥೆ, ನೀರಿನ ವ್ಯವಸ್ಥೆ ಮತ್ತು ಉಹಾರದ ವ್ಯವಸ್ಥೆಯನ್ನು ಮಾಡುವುದು ಲೋಕೋಪಯೋಗಿ ಮತ್ತು ಜಿಪಂ ಇಲಾಖೆಯ ಜವಾಬ್ದಾರಿಯಾಗಿದೆ. ಶಿಕ್ಷಣ ಇಲಾಖೆಯಿಂದ ಸಾಂಸ್ಕøತಿ ಕಾರ್ಯಕ್ರಮಗಳ ಆಯೋಜನೆ ಮಾಡುವ ಮೂಲಕ ಪ್ರತಿಭಾಂತ ಮಕ್ಕಳನ್ನು, ಸಾಂಸ್ಕøತಿಕ ಕಲಾತಂಡಗಳನ್ನು ಕರೆಸುವ ಜವಾಬ್ದಾರಿ ನಿಮ್ಮದಾಗಿರುತ್ತದೆ. ದೇಶಭಕ್ತಿಗೀತೆ, ಗಾಯನ, ಜಾನಪದ ಮತ್ತು ಸಾಂಸ್ಕøತಿ ಕಲಾ ಪ್ರಕಾರಗಳ ಮೆರವಣಿಗೆ ಸೇರಿದಂತೆ ಕ್ರಿಯಾಶೀಲ ಚಟುವಟಿಕೆಗಳನ್ನು ವೇದಿಕೆಯಲ್ಲಿ ನಡೆಸಿ ಎಂದು ಶಾಸಕ ಎಸ್.ವಿ.ರಾಮಚಂದ್ರ ಸೂಚಿಸಿದರು.ಎಲ್ಲಾ ಇಲಾಖೆಗಳ ಅಧಿಕಾರಿಗಳು ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ಪೊಲೀಸ್ ಇಲಾಖೆಯು ಯಾವುದೇ ಕಾರಣಕ್ಕೂ ಭದ್ರತಾ ಲೋಪವಾಗದಂತೆ ಶಿಸ್ತಿನಿಂದ ಕಾರ್ಯನಿರ್ವಹಿಸಿ ಎಂದು ಪಿಎಸ್‍ಐ ಮಹೇಶ್ ಹೊಸಪೇಟ ಅವರಿಗೆ ಸೂಚನೆ ನೀಡಿದರು. ಎಲ್ಲ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸ್ವಾತಂತ್ರ್ಯೊತ್ಸವ ಯಶಸ್ವಿಗಾಗಿ ಕೈ ಜೋಡಿಸಿ ಎಂದು ಮನವಿ ಮಾಡಿದರು.

ಸ್ವಾತಂತ್ರೋತ್ಸವದ ಮೂರು ದಿನ ಮುಂಚೆಯೇ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಕ್ಕಳಿದಂದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಮಹಾನ್ ನಾಯಕರ ಭಾವಚಿತ್ರಗಳೊಂದಿಗೆ ಜಾಥಾ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. 

ಸಭೆಯಲ್ಲಿ ತಹಶೀಲ್ದಾರ್ ಜಿ.ಸಂತೋಷ್‍ಕುಮಾರ್, ತಾಪಂ ಇಒ ಲಕ್ಷ್ಮೀಪತಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಹೇಶ್ವರಪ್ಪ, ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಚಂದ್ರಪ್ಪ, ಅಧಿಕಾರಿಗಳಾದ ವೆಂಕಟೇಶ್ ಮೂರ್ತಿ, ಮಿಥುನ್ ಕೀಮಾವತ್, ಹಾಲೇಶಪ್ಪ ಸೇರಿ ಎಲ್ಲ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.