ಸ್ವಾತಂತ್ರ್ಯ ದಿನಾಚರಣೆ ಪೂರ್ವ ಸಿದ್ಧತಾ ಸಭೆ


ಸಂಜೆವಾಣಿ ವಾರ್ತೆ
ಸಿರುಗುಪ್ಪ, ಜು.4: 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪುರವ ಸಿದ್ಧತೆ ಕುರಿತು ತಾಲೂಕ ಕಚೇರಿ ಸಭಾಂಗಣದಲ್ಲಿ ಸಭೆ ಪೂರ್ವಭಾವಿ ಸಭೆ ನಡೆಸಲಾಯಿತು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ಎಚ್. ವಿಶ್ವನಾಥ ತಿಳಿಸಿದರು.
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿಜೃಂಭಣೆ ಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸುವಂತೆ ಚರ್ಚಿಸಲಾಯಿತು. ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸುವುದು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರೆವೇರಿಸಿ ಮಕ್ಕಳಿಗೆ ಪ್ರಥಮ, ದ್ವಿತೀಯ ಬಹುಮಾನಗಳನ್ನು  ಆಗಷ್ಟ್ 15ರಂದು ವಿತರಿಸಬೇಕು ಹಾಗೂ ವಿದ್ಯಾರ್ಥಿಗಳಿಗೆ ಸಿಹಿ ಊಟದ ವ್ಯವಸ್ಥೆಯನ್ನು ಮಾಡಲು ವಿತರಿಸಲು ನಿರ್ಣಯಿಸಲಾಯಿತು.
ಸಿರುಗುಪ್ಪ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಇದ್ದರು.