ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ವಿವಿಧ ಸ್ಪರ್ಧೆ

ಕಲಬುರಗಿ:ಆ.12:ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪಿಯು ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಶನಿವಾರ ಕಾಲೇಜಿನ ವಿದ್ಯಾರ್ಥಿಗಳಿಗೆ ದೇಶದ ಸ್ವಾತಂತ್ರ್ಯ ಬಗ್ಗೆ ಭಾಷಣ, ಪ್ರಬಂಧ, ದೇಶಭಕ್ತಿ ಗೀತ ಗಾಯನ ರಂಗೋಲಿ ಸೇರಿದಂತೆ ಮುಂತಾದ ಸ್ಪರ್ಧೆಗಳ ಕಾರ್ಯಕ್ರಮ ಜರುಗಿತು.
ಕಾಲೇಜಿನ ವಿದ್ಯಾರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಚಾರ್ಯ ಮಹಮ್ಮದ್ ಅಲ್ಲಾಉದ್ದೀನ್ ಸಾಗರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ.ಪಾಟೀಲ ಕಾರ್ಯಕ್ರಮ ನಡೆಸಿಕೊಟ್ಟರು. ಉಪನ್ಯಾಸಕರಾದ ನಯಿಮಾ ನಾಹಿದ್, ರೇಣುಕಾ ಚಿಕ್ಕಮೇಟಿ, ಸಾಹೇಬಗೌಡ ಪಾಟೀಲ ನಿರ್ಣಾಯಕರಾಗಿ ಕಾರ್ಯನಿರ್ವಹಿಸಿದರು. ರವೀಂದ್ರಕುಮಾರ ಬಟಗೇರಿ, ಜಮೀಲ್ ಅಹಮ್ಮದ್, ರಂಜಿತಾ ಠಾಕೂರ್, ಸಮೀನಾ ಬೇಗಂ, ನಾಗಮ್ಮ, ಪ್ರ.ದ.ಸ ನೇಸರ ಎಂ.ಬೀಳಗಿಮಠ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.