ಸ್ವಾತಂತ್ರ್ಯ ದಿನಾಚರಣೆ ಸಮಾರಂಭದ ಸಕಲ ಸಿದ್ದತೆಗೆ ಡಿಸಿ ಸೂಚನೆ

ಸಂಜೆವಾಣಿ ವಾರ್ತೆ

ಶಿವಮೊಗ್ಗ.ಆ.೧: ಆಗಸ್ಟ್ 15 ರಂದು ನಗರದ ಡಿಎಆರ್ ಕವಾಯತು ಮೈದಾನದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ವಿತರಿಸಲು ಕ್ರಮವಹಿಸುವಂತೆ ಪಾಲಿಕೆ ಆಯುಕ್ತರು, ಜಿ.ಪಂ ಉಪಕಾರ್ಯದರ್ಶಿಗಳು ಹಾಗೂ ತಹಶೀಲ್ದಾರರಿಗೆ ತಿಳಿಸಿದರು. ಪೆರೇಡ್ ಹಾಗೂ ಸುತ್ತಮುತ್ತಲಿನ ಜಾಗವನ್ನು ಮುಂಚಿತವಾಗಿ ಸ್ವಚ್ಚಗೊಳಿಸಿ ಸಿದ್ದಗೊಳಿಸುವುದು, ನೀರಿನ ವ್ಯವಸ್ಥೆ, ಆಸನ ವ್ಯವಸ್ಥೆ ವೇದಿಕೆ ಸಿದ್ದತೆ, ವೇದಿಕೆ ಅಲಂಕಾರ ಮಾಡುವಂತೆ ಪಾಲಿಕೆ, ಸಶಸ್ತ್ರ ಮೀಸಲು ಪಡೆ, ಲೋಕೋಪಯೋಗಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಕ್ರೀಡಾ ಯುವಜನ ಸಬಲೀಕರಣ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.ಸರ್ಕಾರದ ಸುತ್ತೋಲೆಯಂತೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮತ್ತು ಕಚೇರಿಗಳಲ್ಲಿ ಪ್ರತಿ ವರ್ಷದಂತೆ ಧ್ವಜಾರೋಹಣಕ್ಕೆ ಸಿದ್ದತೆ ಮಾಡಿಕೊಳ್ಳಬೇಕು.ವಿದ್ಯುದೀಪ ಅಲಂಕಾರ ವ್ಯವಸ್ಥೆ, ಪೊಲೀಸ್ ಭದ್ರತೆ, ಕುಡಿಯುವ ನೀರಿನ ವ್ಯವಸ್ಥೆ,   ಆಂಬುಲೆನ್ಸ್, ಅಗ್ನಿಶಾಮಕ ವಾಹನದ ವ್ಯವಸ್ಥೆ, ಮಕ್ಕಳಿಗೆ ಸಿಹಿ ಹಂಚಿಕೆ ಹಾಗೂ ಆಸ್ಪತ್ರೆ ಮತ್ತು ಇತರೆ ಸಂಸ್ಥೆಗಳಲ್ಲಿ ಹಣ್ಣು, ಸಿಹಿ ಹಂಚಿಕೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿದರು.ನಗರದ ಶಾಲಾ, ಕಾಲೇಜು, ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾದಳ, ಎನ್‍ಸಿಸಿ, ಅಗ್ನಿ ಶಾಮಕ ದಳ, ಹೋಂಗಾಡ್ರ್ಸ್ ವತಿಯಿಂದ ಸಾಮೂಹಿಕ ಕವಾಯಿತು ಏರ್ಪಡಿಸಲಾಗುವುದು. ಮಳೆಯಿಂದ ರಕ್ಷಣೆ ಪಡೆಯಲು ಕವಾಯಿತು ಮೈದಾನದಲ್ಲಿ ಜರ್ಮನ್ ಟೆಂಟ್ ಹಾಕಿಸಲು ಪಿಡಬ್ಲ್ಯುಡಿ ಇಲಾಖೆಗೆ ಸೂಚಿಸಿದರು.ಧ್ವಜಾರೋಹಣದ ನಂತರ ವಿದ್ಯಾರ್ಥಿಗಳಿಂದ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಿ, ನಿಗದಿತ ವೇಳೆಯಲ್ಲಿ ಮುಗಿಯುವಂತೆ ಕ್ರಮ ಕೈಗೊಳ್ಳಲು ಡಿಡಿಪಿಐ ಮತ್ತು ಬಿಇಓ ಅವರಿಗೆ ಸೂಚನೆ ನೀಡಿದರು.ಎಲ್ಲ, ಗ್ರಾ.ಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸರ್ಕಾರದ ಸೂಚನೆಯಂತೆ ‘ಮೇರಿ ಮಿಟ್ಟಿ ಮೇರಾ ದೇಶ್’ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾ ಪಂಚಾಯ್ತಿ ಮತ್ತು ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್‍ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ,, ಎಸಿ ಸತ್ಯನಾರಾಯಣ ಜಿ ಹೆಚ್, ತಹಶೀಲ್ದಾರ್ ನಾಗರಾಜ್, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.