ಸ್ವಾತಂತ್ರ್ಯ ಭಾರತ ಸಾಕಷ್ಟು ಅಭಿವೃದ್ಧಿ ಕಂಡಿದೆ: ಪ್ರೊ.ಹೆಚ್.ವಿರುಪಾಕ್ಷಪ್ಪ 

 ಹರಿಹರ.ಜು.೨೨: ಸ್ವಾತಂತ್ರ ಹೊಂದಿದ ಭಾರತ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದ್ದು, ಸಾಕಷ್ಟು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಯನ್ನು ಕಂಡಿದೆ ಎಂದು ಸರ್ಕಾರಿ ಪ್ರಥಮ ದರ್ಜಿ ಕಾಲೇಜು ಪ್ರಾಂಶುಪಾಲರಾದ ಪ್ರೊ.ಹೆಚ್.ವಿರುಪಾಕ್ಷಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.ಇಲ್ಲಿನ ಸರ್ಕಾರಿ ಪ್ರಥಮ ದರ್ಜಿ ಕಾಲೇಜುನಲ್ಲಿ “75ನೇ ಸ್ವಾತಂತ್ರದ ಅಮೃತ ಮಹೋತ್ಸವ”ದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಪೇಂಟಿAಗ್ ಮತ್ತು ದೇಶಭಕ್ತಿ ಗೀತೆ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಸ್ವಾತಂತ್ರö್ಯ ದಿನಾಚರಣೆಯ ಆಚರಣೆಯ ಮಹತ್ವ ಪ್ರಚುರ ಪಡಿಸಿಸುವ ಉದ್ದೇಶದಿಂದ 75ನೇ ಸ್ವಾತಂತ್ರö್ಯದ ಅಮೃತ ಮಹೋತ್ಸವದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸರ್ಕಾರವು ಆದೇಶಿಸಿದೆ. ಇದರ ಅಂಗವಾಗಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವಣಗೊಳಿಸಲು ಒಂದು ಉತ್ತಮ ವೇದಿಕೆಯನ್ನು ಕಲ್ಪಿಸಿಕೊಡಲಾಗಿದೆ. ಇದನ್ನು ವಿದ್ಯಾರ್ಥಿಗಳು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. 75ನೇ ಸ್ವಾತಂತ್ರö್ಯದ ಅಮೃತ ಮಹೋತ್ಸವದ ವಿಶೇಷ ಕಾರ್ಯಕ್ರಮದ ಸಂಯೋಜಕರಾದ ಪ್ರೊ.ಮಂಜುನಾಥ ನರಸಗೊಂಡರ, ಸದಸ್ಯರಾದ ಡಾ.ಟಿ.ನಾಗೇಶ್, ಡಾ.ಅನಂತನಾಗ್.ಎಚ್.ಪಿ. ಅವರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಕಾಲೇಜಿನ ಅಧ್ಯಾಪಕರಾದ ಬಿ.ಬಾಲಚಂದ್ರ, ಆರ್.ವಿಶ್ವನಾಥ್, ಡಿ.ಆರ್. ವಂದನ ಶೆಟ್ಟಿ, ಹೆಚ್.ಎಸ್.ಶ್ವೇತಾ, ಬಿ ಬಿ ಆಯಿಷಾ ಅವರುಗಳು ಉಪಸ್ಥಿತರಿದ್ದರು. ದ್ವಿತೀಯ ಬಿಕಾಂ ವಿಭಾಗದ ವಿದ್ಯಾರ್ಥಿ ನಾಗರಾಜ ಮಾ.ಬಡಣ್ಣನವರ ಅವರು ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.