
ಚಿಕ್ಕನಾಯಕನಹಳ್ಳಿ, ಆ. ೧೨- ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ೮೧ನೇ ವರ್ಷದ ಕ್ವಿಟ್ ಇಂಡಿಯಾ ಚಳವಳಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್, ಮಹಾತ್ಮಗಾಂಧೀಜಿ ಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಕ್ವಿಟ್ ಇಂಡಿಯಾ ಚಳವಳಿಯ ಹೋರಾಟಗಾರರ ಸ್ಮರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿ ಮಾಜಿ ಶಾಸಕ ಕೆ.ಎಸ್. ಕಿರಣ್‌ಕುಮಾರ್, ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಳಲ್ಲಿ ಕ್ವಿಟ್ ಇಂಡಿಯಾ ಚಳವಳಿ ನಿರ್ಣಾಯಕ ಹೋರಾಟವೆನಿಸಿದೆ. ಬ್ರಿಟಿಷರ ದಾಸ್ಯದಿಂದ ಮುಕ್ತರಾಗಲು ಮಹಾತ್ಮ ಗಾಂಧೀಜಿಯವರು ಚಳವಳಿಗಾರರಿಗೆ ಕೊಟ್ಟ ಕರೆಯೇ ಬ್ರಿಟಿಷರೆ ಭಾರತ ಬಿಟ್ಟು ತೊಲಗಿ ಎಂಬುದು ಕೋಟ್ಯಂತರ ಹೋರಾಟಗಾರರ ಎದೆಯಲ್ಲಿ ಕಿಚ್ಚು ಮೂಡಿಸಿದರ ಫಲವೇ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಬಿ.ಲಕ್ಕಪ್ಪ, ಹುಳಿಯಾರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಟಿ. ಚಿಕ್ಕಣ್ಣ, ಮುಖಂಡರಾದ ಸಿ.ಬಸವರಾಜು, ಕೆ.ಜಿ.ಕೃಷ್ಣೇಗೌಡ, ತಿಮ್ಮಯ್ಯ, ಕಿರಣ್, ಮಂಜುನಾಥ್, ನರಸಿಂಹಮೂರ್ತಿ, ಬೇವಿನಹಳ್ಳಿ ಚನ್ನಬಸವಯ್ಯ, ಪರಮೇಶ್ವರ್, ಲಿಂಗದೇವರು, ಗೋವಿಂದರಾಜು, ಬ್ರಹ್ಮಾನಂದ್ ಮತ್ತಿತರರು ಉಪಸ್ಥಿತರಿದ್ದರು.