ಸ್ವಾತಂತ್ರ್ಯ ಹೋರಾಟಗಾರರ ಆದರ್ಶದಂತೆ ಸಾಗೋಣ


ಗದಗ ಎ.7 : ಲಕ್ಷಾಂತರ ನಾಯಕರ ಹೋರಾಟದ ಫಲವಾಗಿ ಹಾಗೂ ತ್ಯಾಗ ಬಲಿದಾನಗಳಿಂದ 1947ರ ಅಗಸ್ಟ್ 15 ರಂದು ಭಾರತಕ್ಕೆ ಸ್ವಾತಂತ್ರ್ಯ ದೊರಕಿತು. ಸ್ವಾತಂತ್ರ್ಯಗಳಿಸಿ 75 ವರ್ಷದ ಅಂಚಿನಲ್ಲಿರುವ ಇಂದು ನಾವು ಅಮೃತ ಮಹೋತ್ಸವವನ್ನು ಆಚರಿಸುತ್ತಿರುವುದು ಸ್ಮರಣೀಯವಾಗಿದೆ. ಸ್ವಾತಂತ್ರ್ಯ ಬಂದಾಗ ಭಾರತ ಬಡರಾಷ್ಟ್ರವಾಗಿತ್ತು. 75 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಸಾಧಿಸಿ ಈಗ ಜಗತ್ತಿನ ಮುಂಚೂಣಿ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ ಎಂದು ಸಣ್ಣ ಕೈಗಾರಿಕಾ ಮತ್ತು ವಾರ್ತಾ ಇಲಾಖೆ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

ಗದಗ ಜಿಲ್ಲೆಯ ನರಗುಂದ ಪುರಸಭೆ ಆವರಣದಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಲಾದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಅವರು ಸ್ವಾತಂತ್ರ್ಯ ಹೋರಾಟದ ಆ ದಿನಗಳನ್ನು ನಾವು ನೋಡಿಲ್ಲ, ಆದರೆ, ಹೋರಾಟದ ಆ ದಿನಗಳನ್ನು ನಾವಿಂದು ಅರಿಯೋಣ. ಅರಿಯುವ ಮೂಲಕ ಅವರ ಆದರ್ಶದಂತೆ ಬದುಕೋಣ ಎಂದರು. ನಾವು ಇತಿಹಾಸವನ್ನು ಅರಿಯಬೇಕಾದ ಮತ್ತು ಇತಿಹಾಸದ ಮೌಲ್ಯಗಳನ್ನು ನೆನೆಯಬೇಕಾದ ಅಗತ್ಯವಿದೆ. ಇತಿಹಾಸವನ್ನರಿಯದೇ ಭವಿಷ್ಯವನ್ನು ನಿರ್ಮಿಸಲು ಸಾಧ್ಯವಿಲ್ಲ. ನಮ್ಮ ಭವ್ಯ ಭಾರತದ, ಭವ್ಯ ಕರ್ನಾಟಕದ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಸ್ಮರಿಸುವ ಸುದಿನವಿಂದು ನಮಗೆ ಲಭಿಸಿದೆ. ಪ್ರಧಾನಿಗಳ ಆಶಯದಂತೆ ಅಮೃತ ಮಹೋತ್ಸವ ಕಾರ್ಯಕ್ರಮ ನವ ಭಾರತದ ಕ್ರಾಂತಿಗೆ ಮುನ್ನಡೆಯಾಗಲಿ ಎಂದರು.

ಮಾರ್ಚ್ 12ರಂದು ಗುಜರಾತನ ಸಬರಮತಿ ಆಶ್ರಮದಲ್ಲಿ ಅಮೃತಮಹೋತ್ಸವ ಕಾರ್ಯಕ್ರಮ ಆರಂಭವಾಗಿದ್ದು, ದೇಶದ 75 ಕಡೆಗಳಲ್ಲಿ 75 ವಾರಗಳ ಕಾಲ ನಡೆಯಲಿದೆ. ಭಾರತ ಸ್ವಾತಂತ್ರ್ಯದ 75 ವರ್ಷಗಳ ಆಚರಣೆಯ ಆಜಾದಿ ಕಾ ಅಮೃತ ಮಹೋತ್ಸವಕ್ಕೆ ರಾಷ್ಟ್ರೀಯ ಸಮಿತಿಯೊಂದನ್ನು ರಚಿಸಿದ್ದು, ಇದರ ಮೊದಲ ಸಭೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಿತು. 75 ವರ್ಷಗಳ ಸಂಭ್ರಮಾಚರಣೆಯನ್ನು 130 ಕೋಟಿ ಭಾರತೀಯರ ಭಾಗವಹಿಸುವಿಕೆಯ ಮೂಲಕ ಮಾಡಬೇಕಾಗಿದೆ ಮತ್ತು ಜನರ ಈ ಭಾಗವಹಿಸುವಿಕೆಯು ಆಚರಣೆಯ ಕೇಂದ್ರ ಬಿಂದುವಾಗಿರುತ್ತದೆ. ಈ ಭಾಗವಹಿಸುವಿಕೆಯು 130 ಕೋಟಿ ದೇಶವಾಸಿಗಳ ಭಾವನೆಗಳು, ಸಲಹೆಗಳು ಮತ್ತು ಕನಸುಗಳನ್ನು ಒಳಗೊಂಡಿರುತ್ತದೆ ಎಂದು ಪ್ರಧಾನಿಗಳು ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ ಎಂದರು.
ಈವೇಳೆ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ, ಸೈಕಲ್ ಜಾಥಾ, ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಸಚಿವರು ಸಾಂಕೇತಿಕವಾಗಿ ಲ್ಯಾಪ್‍ಟಾಪ್ ವಿತರಿಸಿದರು. ಉಪನ್ಯಾಸಕ ಎಂ.ಎಸ್. ಯಾವಗಲ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಭಾವನಾ ಪಾಟೀಲ, ಉಪಾಧ್ಯಕ್ಷ ಪ್ರಶಾಂತ ಜೋಶಿ, ಜಿಲ್ಲಾ ಪಂಚಾಯತ್ ಸದಸ್ಯೆ ರೇಣುಕಾ ಅವರಾದಿ , ಎಪಿಎಂಸಿ ಅಧ್ಯಕ್ಷ ಯಲ್ಲಪ್ಪ ಗೌಡರ, ಪ್ರಮುಖರಾದ ಅಜ್ಜಪ್ಪ ಹುಡೇದ , ತಿಮ್ಮನಗೌಡರ, ಜಿ.ಬಿ. ಕುಲಕರ್ಣಿ, ಗೂರಪ್ಪ ಆದಪ್ಪನವರ, ಪ್ರಕಾಶಗೌಡ ತಿರಕನಗೌಡ , ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿಲ್ಲಾ ಪೆÇಲೀಸ ವರಿಷ್ಟಾಧಿಕಾರಿ ಯತೀಶ್ ಎನ್, ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗಣ್ಣವರ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರ.