
ಹುಮನಾಬಾದ್ :ಆ.15: ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ ಎಂದು ಶಾಸಕ ಡಾ. ಸಿದ್ದು ಪಾಟೀಲ್ ಹೇಳಿದರು.
ಪಟ್ಟಣದ ತಹಸೀಲ್ ಕಚೇರಿಯಲ್ಲಿ ತಾಲೂಕ ಆಡಳಿತದ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ವೈಜ್ಞಾನಿಕ ತಂತ್ರಜ್ಞಾನದ ಯುಗದಲ್ಲಿ ಮಕ್ಕಳಿಗೆ ಮೌಲ್ಯ ಶಿಕ್ಷಣದ ಅರಿವು ಮೂಡಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಹೀಗಾಗಿ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಇದರ ಜತೆಗೆ ಮಕ್ಕಳು ಕೂಡ ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ಮೈಗೂಡಿಸಿ ಉತ್ತಮ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪ್ರತಿವಂತ ವಿದ್ಯಾರ್ಥಿಗಳಿಗೆ, ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ರೈತರಿಗೆ, ಸಾಹಿತಿಗಳಿಗೆ ಸೇರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ವಿಶೇಷವಾಗಿ ಸನ್ಮಾನಿಸಲಾಯಿತು.
ತಹಸೀಲ್ದಾರ್ ಅಂಜುಮ್ ತಬಸುಮ್, ಗ್ರೇಡ್-2 ಮಂಜುನಾಥ ಪಂಚಾಳ್, ಬಿಎ???ಸ್ಕೆ ಅಧ್ಯಕ್ಷ ಸುಭಾಷ ಕಲ್ಲೂರ, ದೀಪಿಕಾ ನಾಯ್ಕ್, ವೆಂಕಟೇಶ ಗೂಡಾ, ಸುಭಾಷ ಆರ್ಯ, ವಿರಾಂತರೆಡ್ಡಿ, ಮಹಾವೀರ ಜಮಖಂಡಿ, ಶಿವಪ್ರಕಾಶ ಹಿರೇಮಂಠ, ಗೌತಮ, ಬಿ.ಡಿ. ಪಾಟೀಲ್ ಸೇರಿ ಅನೇಕರಿದ್ದರು.