ಸ್ವಾತಂತ್ರ್ಯ ಹೋರಾಟಗಾರರ ಬಲಿದಾನ ಮರೆಯದಿರಿ: ಆರ್. ಎಮ್. ಶಿಂಧೆ

ಕಲಬುರಗಿ:ಆ.15:ಅನೇಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದ ಪ್ರತಿಫಲವಾಗಿ ನಾವಿಂದು ಸ್ವತಂತ್ರವಾಗಿ ಬದುಕುತ್ತಿದ್ದೇವೆ. ವಿದ್ಯಾರ್ಥಿಗಳು ಇದನ್ನು ಎಂದು ಮರೆಯಬಾರದು ಎಂದು ಆರ್.ಎಂ.ಶಿಂಧೆ ಅಭಿಪ್ರಾಯಪಟ್ಟರು.

ನಗರದ ರಾಮ ಮಂದಿರ ಹತ್ತಿರವಿರುವ ವಿವೇಕಾನಂದ ವಿದ್ಯಾ ನಿಕೇತನ ಶಾಲೆಯಲ್ಲಿ 77ನೆಯ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲೆಯ ಶೈಕ್ಷಣಿಕ ನಿರ್ದೇಶಕ ಆರ್. ಎಮ್. ಶಿಂಧೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು

ಮಹಾತ್ಮ ಗಾಂಧೀಜಿ, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್, ಸರ್ದಾರ್ ವಲ್ಲಭಾಯಿ ಪಟೇಲ್ ಹೀಗೆ ಅನೇಕ ಮಹಾನ್ ವ್ಯಕ್ತಿಗಳ ಹೋರಾಟ ಬಲಿದಾನದಿಂದ ಭಾರತವು ಸ್ವತಂತ್ರವಾಯಿತು ಇಂತಹ ಮಹನೀಯರ ಆದರ್ಶಗಳು ಸಿದ್ಧಾಂತಗಳು ತತ್ವಗಳು ತ್ಯಾಗ ಮನೋಭಾವ ತಾಳ್ಮೆ ಶಕ್ತಿ ಸಹಕಾರ ನಾಯಕತ್ವ ಸತ್ಯ ಶಾಂತಿ ಅಹಿಂಸೆ ಯಂತಹ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಳ್ಳಿ ಅಳವಡಿಸಿಕೊಳ್ಳುವುದರ ಮೂಲಕ ಅವರಿಗೆ ಗೌರವಿಸಬೇಕು ಅಂದಾಗ ಸ್ವಾತಂತ್ರ್ಯ ದಿನಾಚರಣೆಗೆ ಒಂದು ಅರ್ಥವಿರುತ್ತದೆ ಎಂದು ಹೇಳಿದರು

ಕಾರ್ಯಕ್ರಮದಲ್ಲಿ ಮಕ್ಕಳು ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣಗಳನ್ನು ಹಾಕಿಕೊಂಡು ಎಲ್ಲರ ಗಮನ ಸೆಳೆದರು. ಹಲವು ವಿದ್ಯಾರ್ಥಿಗಳು ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಮಾ ತುಜೆ ಸಲಾಂ ಎಂಬ ನೃತ್ಯರೂಪಕ ಹಾಗೂ ಪ್ರೇರಣ ಮತ್ತು ತಂಡದವರ ಸಮೂಹ ಗಾಯನ ಎಲ್ಲರ ಮೆಚ್ಚುಗೆ ಪಡೆಯ ಪಡೆಯಿತು.

ಸಂಸ್ಥೆಯ ಅಧ್ಯಕ್ಷ ಸುವರ್ಣ ಭಗವತಿ, ಪ್ರಾಂಶುಪಾಲ ಸಿದ್ದಪ್ಪ ಭಗವತಿ, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಪೆÇೀಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು