ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ವಿಧಿವಶ

ಬೆಂಗಳೂರು, ಮೇ ೨೬- ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ(೧೦೪) ಅವರು ಅವರು ಹೃದಯಾಘಾತದಿಂದ ವಿಧಿವಶರಾದರು.
ಬುಧವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಹಲವು ದಿನಗಳಿಂದ ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ನಗರ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕೊರೋನಾ ಸೋಂಕಿಗೆ ಒಳಗಾಗಿದ್ದಂತ ಅವರು ೧೦೪ ವರ್ಷದಲ್ಲೂ ಸೋಂಕಿನ ಚಿಕಿತ್ಸೆಗೆ ಸ್ಪಂಧಿಸಿ, ಕೊರೋನಾ ಗೆದ್ದೇ ಬಂದರು ಎನ್ನುತ್ತಿರುವಾಗಲೇ, ಮತ್ತೆ ಸೋಂಕು ಉಲ್ಪಣಿಸಿತ್ತು.
ಈ ಹಿನ್ನಲೆಯಲ್ಲಿ ಜಯದೇವ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಬುಧವಾರ ಹೃದಯಾಘಾತದಿಂದ ಕೊನೆಯುಸಿರೆಳೆದರು ಎಂದು ಅವರ ಆಪ್ತರು ತಿಳಿಸಿದರು.