ಸ್ವಾಮಿ ವಿವೇಕಾನಂದರು ತತ್ವಜ್ಞಾನಿಗಳು


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಜ.20: ಸ್ವಾಮಿ ವಿವೇಕಾನಂದರು ಭಾರತದ ಅತ್ಯಂತ ಸುಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ವಜ್ಞಾನಿಗಳಲ್ಲಿ ಒಬ್ಬರಾಗಿದ್ದರು. ನಿರ್ಭಯ ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದರು ಎಂದು ಉಪಪ್ರಚಾರ್ಯ ಆಯುಷ ತಿಳಿಸಿದರು. ನಗರದ ಜ್ಞಾನಭಾರತಿ ಪದವಿ ಕಾಲೇಜಿನಲ್ಲಿ ಬಳ್ಳಾರಿಯ ನೆಹರು ಯುವ ಕೇಂದ್ರ ಮತ್ತು ಸಿರುಗುಪ್ಪದ ನೇತ್ರ ಕಲಾ ಸಂಘದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 161ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ರಾಷ್ಟ್ರೀಯ ಯುವ ದಿನ ಯುವ ಸಪ್ತಹ ಕಾರ್ಯಕ್ರಮ 2024ರ ಉದ್ಘಾಟಿಸಿ ಮಾತನಾಡಿದ ಅವರು ಸ್ವಾಮಿ ವಿವೇಕಾನಂದರು ದೇಶದ ಪಾರಿಯಾಟನೆ ಹೋಗುವಾಗ ಅವರ ಜೊತೆಗೆ ಕಮಂಡಲ ದಂಡ ಮತ್ತು ಅವರಿಗೆ ಪ್ರಿಯವಾದ ಭಗವದ್ಗೀತೆ ಹಾಗೂ ದಿ ಇಮಿಟೇಶನ್ ಆಫ್ ಕ್ರೈಸ್ತ ಎನ್ನುವ ಪುಸ್ತಕಗಳನ್ನು ಒಯ್ಯುತ್ತಿದ್ದರು. ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಗೌರವಿಸಲು ಜನವರಿ 12ರಂದು ರಾಷ್ಟ್ರೀಯ ಯುವ ದಿನ ಎಂದು ಆಚರಿಸಲಾಗುತ್ತಿದ್ದು ನಮ್ಮ ಯುವ ಜನಾಂಗಕ್ಕೆ ಆದರ್ಶವಾಗಿರುವ ಸ್ವಾಮಿ ವಿವೇಕಾನಂದರು ಆದರ್ಶಗಳನ್ನು ಪ್ರತಿಯೊಬ್ಬ ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬದುಕಿನಲ್ಲಿ ಉತ್ತಮ ಸಾಧನೆಯನ್ನು ಮಾಡಲು ಮುಂದಾಗಬೇಕು ಎಂದು ಹೇಳಿದರು ಇದೇ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರ ವಿಚಾರಧಾರೆ ಕುರಿತು ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಭಾಷಣ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಾದ ವೀರೇಂದ್ರ ಪ್ರಥಮ ದರ್ಶನ ದ್ವಿತೀಯ ಡಿ ನಂದಿನಿ ತೃತೀಯ ಕಾವ್ಯ ಸಮಾಧಾನಕರ ಸ್ಥಾನ ಪಡೆದು ಇತರೆ ವಿದ್ಯಾರ್ಥಿಗಳಿಗೆ ಮಾದರಿಯಾದರು ವಿಜೇತರಾದ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಭಾವಚಿತ್ರ ಮತ್ತು ಪುಸ್ತಕಗಳನ್ನು ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಉಪಸ್ಥಿತಿಯಲ್ಲಿ ನೇತ್ರಕಲಾ ಸಂಘದ ಕಾರ್ಯದರ್ಶಿ ವೀರೇಶ್ ದಳವಾಯಿ ಕಾಲೇಜಿನ ಉಪನ್ಯಾಸಕರಾದ ಕುರವಳ್ಳಿ ತಿಮ್ಮಯ್ಯ ಸಿಬ್ಬಂದಿ ವೀರೇಶ್ ಮತ್ತು ವಿದ್ಯಾರ್ಥಿಗಳು ಇದ್ದರು.