ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ಹುಣಸಗಿ :ಜ.13: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಿನಾಂಕ 12.01.2023 ರಂದು ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಜಯಂತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಡಾ.ಜಗದೀಶ ಕುಮಾರ ನಾಯಕ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ವಿಚಾರಗಳನ್ನು ತಿಳಿಸಿದರು ಈ ಸಂದರ್ಭದಲ್ಲಿ ಅರ್ಥಶಾಸ್ತ್ರದ ಉಪನ್ಯಾಸಕರದ ಶರಣಕುಮಾರ, ಡಾ.ಸಂತೋಷ ರಾಥೋಡ್, ಸುರೇಶ್ ಚಲವಾದಿ, ಮಹದೇವಪ್ಪ, ಸಂತೋಷ ನಡಿಹಾಳ, ಶ್ರೀನಾಥ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.