ಸ್ವಾಮೀಜಿಗಳಿಂದ ಕೆಪಿಸಿಸಿ ಅಧ್ಯಕ್ಷರ ಭೇಟಿ

ಬೆಂಗಳೂರು, ಜೂ. ೨೯- ಗದಗದ ಬಾಳೆ ಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ, ವಿಜಯಪುರದ ಬಸವಕುಮಾರ ಸ್ವಾಮೀಜಿ ಅವರ ನೇತೃತ್ವದಲ್ಲಿ ಉತ್ತರ ಕರ್ನಾಟಕದ ಲಿಂಗಾಯತ ಹಾಗೂ ಹಿಂದುಳಿದ ವರ್ಗಗಳ ಸುಮಾರು ೨೫ ಮಠಗಳ ಸ್ವಾಮೀಜಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರವರನ್ನು ನಗರದ ಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.