ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಕರೆ


ಸಂಜೆವಾಣಿ ವಾರ್ತೆ
ಹರಪನಹಳ್ಳಿ, ಜು.20: ಮಹಿಳೆಯರು ಸರಕಾರಿ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿಯ ಬದುಕನ್ನು ರೂಪಿಸಿಕೊಳ್ಳಿ ಎಂದು ಶಾಸಕ ಜಿ.ಕರುಣಾಕರ ರೆಡ್ಡಿ ಹೇಳಿದರು.
ಸಾಮಥ್ರ್ಯ ಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಹಾಗೂ ತಾಲೂಕು ಪಂಚಾಯಿತಿ ಸಹಯೋಗದೊಂದಿಗೆ ಅಮೃತ ಸ್ವ-ಸಹಾಯ ಕಿರು ಉದ್ಯಮಿಗಳ ಯೋಜನೆಯಡಿಯಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಮೂರು ದಿನ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸ್ವಾತಂತ್ರೋತ್ಸವ ಅಂಗವಾಗಿ ಸರಕಾರವು ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಂತೆ ಮಹಿಳೆಯರು ಸರಕಾರಿ ಸೌಲಭ್ಯಗಳನ್ನು ಸರಿಯಾಗಿ ವಿನಿ ಯೋಗಿಸಿಕೊಂಡು ತಮ್ಮ ಆರ್ಥಿಕ ಪರಿಸ್ಥಿತಿ ಯನ್ನು ಉತ್ತಮ ಪಡಿಸಿಕೊಂಡು ಸ್ವಾವ ಲಂಬಿಯ ಬದುಕನ್ನು ರೂಪಿಸಿಕೊಳ್ಳಿ. ಹರಪನಹಳ್ಳಿ ತಾಲೂಕಿನಲ್ಲಿ ಒಟ್ಟು 35 ಸ್ವ-ಸಹಾಯ ಸಂಘಗಳಿಗೆ ಪ್ರತಿ ಸಂಘಕ್ಕೆ 1 ಲಕ್ಷ ಅನುದಾನವನ್ನು ಬಿಡುಗಡೆಗೊಳಿ ಸಲಾಗಿದೆ. ಈ ಯೋಜನೆಯಲ್ಲಿ ಕೋಳಿ ಸಾಕಾಣಿಕ, ಕುರಿ ಸಾಕಾಣಿಕೆ, ಟೈಲರಿಂಗ್ ತರಬೇತಿ, ಹಸು ಸಾಕಾಣಿಕೆ ಈ ಎಲ್ಲಾ ಯೋಜ ನೆಗಳ ಬಗ್ಗೆ ತರಬೇತಿಯನ್ನು ನೀಡಲಾಗುತ್ತದೆ ಎಂದರು.
ಪುರಸಭಾ ಅಧ್ಯಕ್ಷ ಎಚ್.ಎಂ.ಅಶೋಕ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಹಿಳೆಯರಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತಂದಿದೆ. ಈ ನಿಟ್ಟಿನಲ್ಲಿ ಅವುಗಳನ್ನು ಪ್ರಯೋಜನವನ್ನು ಸರಿಯಾಗಿ ಬಳಕೆ ಮಾಡಿಕೊಂಡು ಮಹಿಳೆ ಯರು ತಮ್ಮ ಬದುಕನ್ನು ಕಟ್ಟಿಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಣಾಧಿಕಾರಿ ಪ್ರಕಾಶ್ ನಾಯ್ಕ್,ಸಿಡಿಪಿಓ ಹರೀಶ್, ಅಂಗನವಾಡಿ ಕಾರ್ಯಕರ್ತೆಯರ ಮೇಲ್ವಿಚಾರಕಿ ರೇಣುಕಾ ಹಾಲೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.