ಸ್ವೀಪ್ ಕಾರ್ಯಕ್ರಮ ವೇಗಕ್ಕೆ ಡಿಸಿ ಕರೆ

ಕೋಲಾರ, ,೨೯-ಮುಂಬರಲಿರುವ ೨೦೨೪ರ ಸಾರ್ವತ್ರಿಕ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸೀಪ್ ಕಾರ್ಯಕ್ರಮಗಳನ್ನು ಚುರುಕುಗೊಳಿಸಲು ಜಿಲ್ಲೆಯ ಎಲ್ಲಾ ತಾಲೂಕು ಇಓ ಗಳಿಗೆ ಜಿಲ್ಲಾಧಿಕಾರಿ ಅಕ್ರಂಪಾಷ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಂಗ ಸಭಾಂಗಣದಲ್ಲಿ ಸಭಾಂಗಣದಲ್ಲಿ ಸ್ವೀಪ್ ಕಾರ್ಯಕ್ರಮವನ್ನು ಎಲ್ಲಾ ತಾಲೂಕು ಇಓ ಗಳು ಜಿಲ್ಲೆಯಲ್ಲಿರುವ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಮೊದಲೇ ಕಾಲೇಜುಗಳಲ್ಲಿ ಮೂರು ದಿನಗಳ ಮುಂಚಿತವಾಗಿಯೇ ತಿಳಿಸಿ ವಿದ್ಯಾರ್ಥಿಗಳಿಗೆ ಅಗತ್ಯವಾದ ದಾಖಲಾತಿಗಳನ್ನು ತರುವಂತೆ ಹಾಗೂ ಶಾಲಾ ಕಾಲೇಜುಗಳಲ್ಲಿ ಯುವ ಮತದಾರರನ್ನು ಸೇರ್ಪಡೆ ಮಾಡಿಕೊಳ್ಳ ಬೇಕೆಂದು ತಿಳಿಸಿದರು.
ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿ ಮೂಡಿಸಿ, ನಗರ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಎಲ್ಲಾ ಬಿ.ಎಲ್. ಓ.ಗಳನ್ನು, ಭೇಟಿ ನೀಡಿ ಅವರ ಜೊತೆ ಸಭೆಯನ್ನು ನಡೆಸಿ ಎಂದರು.
ಸಭೆಯಲ್ಲಿ ಉಪ ವಿಭಾಗ ಅಧಿಕಾರಿ ವೆಂಕಟಲಕ್ಷ್ಮಿ, ಎಲ್ಲಾ ತಾಲೂಕು ಇಓ ಗಳು, ನಗರಸಭೆ ಆಯುಕ್ತರು, ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.