
ಕೋಲಾರ, ನ,೧೧- ನಗರದ ಜಿಲ್ಲಾ ಪಂಚಾಯತಿಯಲ್ಲಿ ರಾಜ್ಯ ಚುನಾವಣಾ ಸ್ವೀಪ್ ನೋಡಲ್ ಅಧಿಕಾರಿಗಳಾದ ಪಿ.ಎಸ್. ವಸ್ತ್ರದ್ ಅವರ ಅಧ್ಯಕ್ಷತೆಯಲ್ಲಿ ಸ್ವೀಪ್ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಗಿತ್ತು.
ಸಭೆಯಲ್ಲಿ ಎನ್.ವಿ.ಡಿ, ಎಸ್.ಎಸ್.ಆರ್ ಬಗ್ಗೆ ಪ್ರಗತಿ ಪರಿಶೀಲಿಸಿ, ಮತದಾನದ ಪ್ರಮಾಣ ಹೆಚ್ಚಿಸಲು ಹಾಜರಿದ್ದ ಎಲ್ಲಾ ಅಧಿಕಾರಿಗಳಿಗೆ ಅರಿವು ಮೂಡಿಸಲು ಸೂಚಿಸಿದರು. ಇದೇ ವೇಳೆ ಚಿನ್ಮಯ ಪ್ರೌಢಶಾಲೆಯಲ್ಲಿ, ಮತದಾರರ ಸಾಕ್ಷರತಾ ಸಂಘಗಳ ಸದಸ್ಯರನ್ನು ಭೇಟಿ ಮಾಡಿ ಇವಿಎಂ, ವಿ.ಹೆಚ್.ಎ ಆಪ್, ಎನ್.ವಿ.ಡಿ ಇತರೆ ವಿಷಯಗಳ ಬಗ್ಗೆ ಚರ್ಚಿಸಿದರು. ಹಾಗೂ ವಿಧ್ಯಾರ್ಥಿಗಳಿಗೆ ಚುನಾವಣಾ ಬಗ್ಗೆ ಇದ್ದ ಮಾಹಿತಿ ಕೇಳಿ ಸಂತಸ ವ್ಯಕ್ತಪಡಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವಕುಮಾರ್, ಸಹಾಯಕ ಯೋಜನಾಧಿಕಾರಿ ಗೋವಿಂದ ಗೌಡ, ಎಲ್ಲಾ ತಾಲ್ಲೂಕು ಕಾರ್ಯನಿರ್ವಾಹಕಾಧಿಕಾರಿಗಳು, ಡಯೆಟ್ ಪ್ರಾಂಶುಪಾಲರು, ಎಲ್ಲಾ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ರಾಜ್ಯ/ ಜಿಲ್ಲೆ/ ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೈನರ್ ಗಳು ಹಾಗೂ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.