ಸ್ವ ಗ್ರಾಮದಲ್ಲಿ ಮತ ಚಲಾಯಿಸಿದ ಸಚಿವ ಖೂಬಾ

ಸಂಜೆವಾಣಿ ವಾರ್ತೆ
ಔರಾದ : ಮೇ.7:ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹಾಲಿ ಸಂಸದ ಭಗವಂತ ಖೂಬಾ ಅವರು ಪಟ್ಟಣದ ಬೂತ್ ನಂ. 84ರಲ್ಲಿ ಕುಟುಂಬ ಸಮೇತವಾಗಿ ಮತದಾನ ಮಾಡಿದರು.
ಮತದಾನದ ಬಳಿಕ ಭಗವಂತ ಖೂಬಾ ಅವರು ಮಾತನಾಡಿ, ‘ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳು, ದೇಶದ ಸುರಕ್ಷತೆ, ಗಡಿ ಭದ್ರತೆ, ವಿದೇಶಾಂಗ ನೀತಿ ದೇಶದ ಅಭಿವೃದ್ಧಿಗೆ ಮುನ್ನುಡಿ ಹಾಡಿದೆ, ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಹಾಗೂ ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು, ಜನರ ಆಶೀರ್ವಾದ ನಮ್ಮ ಗೆಲುವಿಗೆ ಸಾಕ್ಷಿಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ರಾಜ್ಯದ ಬಗ್ಗೆ ಸಾಕಷ್ಟು ಒಲವು ಹೊಂದಿದ್ದಾರೆ. ಅವರ ಆಶೀರ್ವಾದದಿಂದ ನಾವು ಗೆಲುವು ಸಾಧಿಸುತ್ತೇವೆ’ ಎಂದು ಭಗವಂತ ಖೂಬಾ ಹೇಳಿದರು.