ಹಂಚಿನಾಳ:ಸರಕಾರಿ ಶಾಲೆಯಲ್ಲಿ ಸರಸ್ವತಿ ಪೂಜೆ

ಗಬ್ಬೂರು:-ದೇವದುರ್ಗ ತಾಲೂಕಿನ ಶಾವಂತಗೇರಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಂಚಿನಾಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶುಕ್ರವಾರ ಸರಸ್ವತಿ ಪೂಜಾ ಸಮಾರಂಭವನ್ನು ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಿದರು.
ಪೂಜಾ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಪಕಿಯಾದ ಯಶೋಧ ಸಹಶಿಕ್ಷಕಿಯಾದ ಶೈಲಜಾ ಅವರಿಂದ ಮಕ್ಕಳ ಇಷ್ಟದಂತೆ ವಿಶೇಷವಾಗಿ ಹೋಳಿಗೆ ಮತ್ತು ತುಪ್ಪ ಊಟದ ವ್ಯವಸ್ಥೆ ಮಾಡಿದ್ದರು.
ಗುರು-ಶಿಷ್ಯರ ನಡುವಿನ ಸಂಬಂಧ ಹಾಗೂ ಬಾಂಧವ್ಯತೆಯನ್ನು ಬಲಗೊಳಿಸಲು ಇದು ಸರಕಾರಿ ಶಾಲೆಯು ತಾಲೂಕಿನಲ್ಲಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲೂ ಗಮನಾರ್ಹ ಸಾಧನೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವಂತಹ ಕಾರ್ಯಚಟುವಟಿಕೆಗಳನ್ನು ನಡೆಸಿ ವಿದ್ಯಾರ್ಥಿಗಳ ಉತ್ಸಾಹವನ್ನು ಹೆಚ್ಚಿಸಲು ಶ್ರಮಿಸುತ್ತಿರುವ ಹಂಚಿನಾಳ ಶಾಲೆಯ ಮುಖ್ಯಶಿಕ್ಷಕಿ ಯಶೋಧ ಮತ್ತು ಸಹಶಿಕ್ಷಕಿಯಾದ ಶೈಲಜಾ ಇವರಿಬ್ಬರ ಕಾರ್ಯವೈಖರಿಗೆ ಪ್ರಶಂಸೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಪಾಲಕರು,ಅಂಗನವಾಡಿ ಕಾರ್ಯಕರ್ತರು,ಅಡುಗೆ ಸಿಬ್ಬಂದಿಗಳು,ವಿದ್ಯಾರ್ಥಿಗಳು ಸರಸ್ವತಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.