ಹಂದನಕೆರೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಹುಳಿಯಾರು, ಏ. ೨೦- ಹಂದನಕೆರೆ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಹೋದರರ ಸಹಯೋಗದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೩೦ನೇ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದಲಿತ ಸಂಘಟನೆಗಳ ಪ್ರಮುಖರು ಮಾತನಾಡಿ, ನಾವುಗಳು ಯಾವಾಗಲೂ ಜೇನುಗೂಡು ಇದ್ದ ಹಾಗೆ ಇರಬೇಕು. ನಮ್ಮ ನಮ್ಮಲ್ಲೇ ದ್ವೇಷ ಅಸೂಯೆ ಇರಬಾರದು. ಅಂಬೇಡ್ಕರ್ ಹಾಕಿಕೂಟ್ಟ ಹಾದಿಯಲ್ಲಿ ನಾವೆಲ್ಲ ಸಾಗಬೇಕಾಗಿದೆ. ನಮ್ಮ ಮಕ್ಕಳಿಗೆ ಶಿಕ್ಷಣವನ್ನು ಕೂಡಿಸಬೇಕು. ಆಗ ಮಾತ್ರವೇ ಬದಲಾವಣೆ ಸಾಧ್ಯ. ಎಲ್ಲಾ ಕ್ಷೇತ್ರಗಳಲ್ಲಿಯೂ ಸಹ ನಾವುಗಳೂ ಮುನ್ನಡೆ ಸಾಧಿಸಬೇಕಿದೆ. ಮುಂದಿನ ದಿನಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿಚಾರದಲ್ಲಿ ತಾರತಮ್ಯ ಮಾಡಬಾರದು. ನಾವೆಲ್ಲ ಒಂದೇ ಎನ್ನುವ ಮನಸ್ಥಿತಿ ನಮ್ಮಲ್ಲಿ ಇರಬೇಕಾಗುತ್ತದೆ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ದಲಿತ ಸಂಘಟನೆಗಳ ಮುಖಂಡರಾದ ಬೇವಿನಹಳ್ಳಿ ಚನ್ನಬಸವಯ್ಯ, ಸಿಂಗದಹಳ್ಳಿ ರಾಜ್‌ಕುಮಾರ್, ಲಿಂಗದೇವರು, ವಸಂತ್‌ಕುಮಾರ್, ರಂಗನಾಥ್ ಯಳ್ಳೇನಹಳ್ಳಿ, ನಿರಂಜನ್, ರಂಗಪ್ಪ, ರಂಗಸ್ವಾಮಿ, ಮಂಜುನಾಥ್, ಶ್ರೀನಿವಾಸ್, ರಾಕೇಶ್, ಮಾದಪುರ ರಂಗನಾಥ್ ಮತ್ತಿತರರು ಉಪಸ್ಥಿತರಿದ್ದರು.