ಹಂಪಿ ಉತ್ಸವ-2023 ಲೋಗೊ ಅನಾವರಣಗೊಳಿಸಿದ ಸಿಎಂ

ಹೊಸಪೇಟೆ(ವಿಜಯನಗರ),ಜ.21: ವಿಶ್ವವಿಖ್ಯಾತ ಹಂಪಿಯಲ್ಲಿ ಜ.27ರಿಂದ ನಡೆಯಲಿರುವ ಹಂಪಿ ಉತ್ಸವದ ಆಚರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಉತ್ಸವದ ಲೋಗೊ ಅನಾವರಣಗೊಳಿಸಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಹಂಪಿ ಉತ್ಸವದ ಲೋಗೊವನ್ನು ಬಿಡುಗಡೆ ಮಾಡಲಾಯಿತು.
ಈ ವೇಳೆ ಗೃಹ ಸಚಿವರಾದ ಅರಗ ಜ್ಞಾನೇಂದ್ರ, ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ, ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಪೌರಾಡಳಿತ ಸಚಿವರಾದ ಎಂಟಿಬಿ ನಾಗರಾಜ್, ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಇದ್ದರು.