ಹಕ್ಕಿ ಜ್ವರ: ಹಲವು ರಾಜ್ಯದಲ್ಲಿ ಕಟ್ಟೆಚ್ಚರ

ಬೆಂಗಳೂರು, ಜ.೮- ಕೇರಳದಲ್ಲಿ ಕಾಣಿಸಿಕೊಂಡಿರುವ ಹಕ್ಕಿಜ್ವರ ರಾಜ್ಯದಲ್ಲೂ ಕಾಣಿಸಿಕೊಳ್ಳುವ ಭೀತಿಯಿಂದ ಹಲವು ಜಿಲ್ಲೆಗಳಲ್ಲಿ ಸರ್ಕಾರ ಕಟ್ಟೆಚ್ಚರ ವಹಿಸಿದೆ.
ಕೇರಳ ಗಡಿಗೆ ಹೊಂದಿಕೊಂಡಂತಿರುವ ಜಿಲ್ಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಕೋಳಿ ಮತ್ತು ಕುಕ್ಕುಟ ಉತ್ಪನ್ನಗಳನ್ನು ಪರಿಶೀಲನೆ ನಡೆಸಿ ರಾಜ್ಯಕ್ಕೆ ಪ್ರವೇಶ ನೀಡಬಾರದು ಎಂದು ದಕ್ಷಿಣ ಕನ್ನಡ, ಕೊಡಗು, ಮೈಸೂರು, ಮಂಗಳೂರು, ಚಾಮರಾಜನಗರ ಸೇರಿದಂತೆ ಆರು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.
ಈ ಕುರಿತು ಪ್ರತಿಕ್ರಿಯಿಸುವ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಕೇರಳ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹಕ್ಕಿಜ್ವರ ಸಂಬಂಧ ಸರಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ ಜನರು ಭಯ ಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಮಾತನಾಡಿ, ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ ಹೀಗಾಗಿ ಮಂಗಳೂರಿನಲ್ಲೂ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮಧ್ಯಪ್ರದೇಶ ರಾಜಸ್ಥಾನ ಹಿಮಾಚಲ ಪ್ರದೇಶ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಜ್ವರ ಕಾಣಿಸಿಕೊಂಡಿದೆ