ಹಕ್ಕು ಪತ್ರ, ಜಲ ಜೀವನ್ ಮಿಷನ್ ಕಾಮಗಾರಿಗೆ ಚಾಲನೆ

ಶಿಡ್ಲಘಟ್ಟ.ಜ೧೧:ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಜಲ ಜೀವನ್ ಮಿಷನ್ ಯೋಜನೆಯಡಿ ಸುಮಾರು ೪೩.೬೫ ಲಕ್ಷ ಗಳ ವೆಚ್ಚದ ಸುಮಾರು ೬೯ ಗ್ರಾಮಗಳಿಗೆ ಮನೆ ಮನೆಗೆ ನಲ್ಲಿ ನೀರು ಸಂಪರ್ಕ ನೀಡುವ ಕಾಮಗಾರಿಗೆ ಚಾಲನೆ ಮತ್ತು ಮಾಳಮಾಚನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ೪೮ ನಿವೇಶನ ರಹಿತ ಫಲಾನುಭವಿಗಳಿಗೆ ಹಕ್ಕು ಪತ್ರವನ್ನು ರಾಜ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ವಿತರಣೆ ಮಾಡಿದರು.
ಶಿಡ್ಲಘಟ್ಟ ತಾಲೂಕಿನ ಮಳಮಾಚನ ಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ೬೯ ಗ್ರಾಮಗಳಿಗೆ ಮನೆ ಮನೆಗೆ ನಲ್ಲಿ ಸಂಪರ್ಕ ೪೩೬೫ ಲಕ್ಷ ರೂಗಳ ಕಾಮಗಾರಿಗಳಿಗೆ ಹಾಗೂ ಮಳಮಾಚನಹಳ್ಳಿ ಗ್ರಾಮದ ಸರ್ವೆ ನಂ ೦೨ ರಲ್ಲಿ ಸುಮಾರು ಎರಡು ಎಕರೆ ಜಮೀನನಲ್ಲಿ ಸುಮಾರು ೮೦ ನಿವೇಶನಗಳನ್ನು ನಿವೇಶನ ರಹಿತರಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಚಿಕ್ಕಬಳ್ಳಾಪುರ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಚಿಕ್ಕಬಳ್ಳಾಪುರ ವತಿಯಿಂದ ಹಮ್ಮಿಕೊಂಡಿದ್ದು ಸಚಿವರು ನಂತರ ಮಾತನಾಡಿ
ಒಂದು ಸಾವಿರಕ್ಕೂ ಅಧಿಕ ಗ್ರಾಮಗಳಲ್ಲಿ ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ ಇನ್ನೂ ಇದರ ಪೈಕಿ ೧೫೦ ಗ್ರಾಮಗಳಲ್ಲಿನ ಕಾಮಗಾರಿಗಳು ಚಾಲನೆ ಗೊಳ್ಳ ಬೇಕಿದ್ದು. ಸದ್ಯದಲ್ಲೇ ಅಲ್ಲಿಯೂ ಸಹ ಚಾಲನೆ ನೀಡಲಾಗುವುದು ಎಂದರು. ಈ ಯೋಜನೆಗೆ ಎಲ್ಲಾ ಗ್ರಾಮ ಪಂಚಾಯತಿಯ ಅಧ್ಯಕ್ಷರು ಮತ್ತು ಇತರ ಪದಾಧಿಕಾರಿಗಳು, ನಗರಸಭಾ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಹಕಾರ ನೀಡಬೇಕು ಎಂದರು.
ಶಾಸಕ ಬಿ.ಎನ್. ರವಿಕುಮಾರ್ ಮಾತನಾಡಿ ಶಿಡ್ಲಘಟ್ಟ ಕ್ಷೇತ್ರದ ಮಳಮಾಚನಹಳ್ಳಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಸುಮಾರು ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ ಮತ್ತು ನಿವೇಶನ ರಹಿತರಿಗೆ ಹಕ್ಕುಪತ್ರಗಳನ್ನು ಸಚಿವರು ವಿತರಿಸಿದ್ದಾರೆ. ಶಿಡ್ಲಘಟ್ಟ ಕ್ಷೇತ್ರದ ಯಾವುದೇ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರೆ ಸಮಸ್ಯೆಗಳಿಗೆ ಸ್ಪಂದಿಸಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಸಚಿವರಿಗೆ ಅಭಿನಂದನೆಗಳು ಎಂದರು.
ಮಾಳಮಾಚನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಭಾಗ್ಯಮ್ಮ ಪಾಪಣ್ಣ , ತಹಶೀಲ್ದಾರ್ ಬಿ.ಎನ್. ಸ್ವಾಮಿ ,ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಮುನಿರಾಜು ,ಸಿ.ಡಿ.ಪಿ.ಓ ನೌತಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರಕುಮಾರ್ , ಆರಕ್ಷಕ ವೃತ್ತ ನಿರೀಕ್ಷಕ ಎಂ.ಶ್ರೀನಿವಾಸ್ ,ಪಿಎಸ್‌ಐ ಗಳಾದ ಎಂ.ವೇಣುಗೋಪಾಲ್ , ಸುನೀಲ್ ಕುಮಾರ್ , ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶೈಲಾಜಾ ಹಾಗೂ ಕಾರ್ಯದರ್ಶಿ ರಾಜಣ್ಣ ಸೇರಿದಂತೆ ಮುಖಂಡರಾದ ಬಂಕ್ ಮುನಿಯಪ್ಪ ,ತಾದೂರು ರಘು ಮುಂತಾದವರು ಹಾಜರಿದ್ದರು.