ಹಗರಿಬೊಮ್ಮನಹಳ್ಳಿ ಟಿಕೆಟ್ ಗೆ ನಾನು  ಆಕಾಂಕ್ಷಿ :ದೀನಾ ಮಂಜುನಾಥ್


(ಸಂಜೆವಾಣಿ ವಾರ್ತೆ)
ಕೊಟ್ಟೂರು, ಜ.13: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ  ಬಿಜೆಪಿ ಪಕ್ಷದಿಂದ ನಾನು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಬಳ್ಳಾರಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ದೀನ ಮಂಜುನಾಥ್ ಅಭಿಪ್ರಾಯ ವ್ಯಕ್ತ ಪಡಿಸಿದರು. ಪಟ್ಟಣದಲ್ಲಿ  ಅವರು ಗುರುವಾರದಂದು ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿ
ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ  ಎಲ್ಲ ಗ್ರಾಮಗಳ ರೈತರಿಗೆ ಹೆಚ್ಚಿನ ರೀತಿಯಲ್ಲಿ  ಮೂಲಸೌಕರ್ಯ ಒದಗಿಸುವ ಸಂಕಲ್ಪ ನನ್ನದಾಗಿದೆ. ಹೀಗಾಗಿ 2023ರ ವಿಧಾನಸಭಾ ಚುನಾವಣೆಯಲ್ಲಿ ಹಗರಿಬೊಮ್ಮನಹಳ್ಳಿ ಎಸ್.ಸಿ ಮೀಸಲು ಕ್ಷೇತ್ರವಿದ್ದು, ಮಹಿಳೆಗೆ ಆಧ್ಯತೆ ನೀಡುತ್ತಾರೆ ಎನ್ನುವ  ವಿಶ್ವಾಸ ವ್ಯಕ್ತಪಡಿಸಿದರು. ಈ ಹಿಂದೆ ಬಳ್ಳಾರಿ ಜಿಲ್ಲಾ   ಪಂಚಾಯತ್ಅಧ್ಯಕ್ಷ ಹಾಗು ಉಪಾಧ್ಯಕ್ಷ ರಾಗಿ ಕಾರ್ಯನಿರ್ವಹಿಸಿ  ಜನಪರ ಯೋಜನೆಗಳನ್ನು ನಿರ್ವಹಿಸಿ, ಹಾಗೂ  ಪಕ್ಷದಲ್ಲಿ ಸೇವೆ ಸಲ್ಲಿಸಿದ್ದೇನೆ. ಈವರೆಗೆ ಪಕ್ಷ ನೀಡಿದ ಜವಾಬ್ದಾರಿಗಳನ್ನು ನಿರ್ವಹಿಸಿದ್ದು  ವಿವಿಧ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದು, ಪಕ್ಷದ ತತ್ವ ಸಿದ್ಧಾಂತಗಳಿಗೆ  ನಾನು ಬದ್ಧರಾಗಿ  ಕಾರ್ಯ ನಿರ್ವಹಿಸಿದ್ದೇನೆ ಎಂದರು.
ಕಳೆದ15 ವರ್ಷ ಕಳೆದರೂ ಜನರ ನಿರೀಕ್ಷಿತ ಮಟ್ಟದಲ್ಲಿ ಈ ಕ್ಷೇತ್ರದಲ್ಲಿ ಮೂಲಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಕನಸು ಹೊತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಕ್ಷೇತ್ರದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವುದರ ಮೂಲಕ ನಿರುದ್ಯೋಗ ನಿವಾರಣೆ, ಎಲ್ಲ ಗ್ರಾಮ ಹಾಗೂ ನಗರಗಳಿಗೆ ಚರಂಡಿ ವ್ಯವಸ್ಥೆ, ಗುಣಮಟ್ಟದ ರಸ್ತೆ ಅಭಿವೃದ್ಧಿ, ಶುದ್ಧ ಕುಡಿಯುವ ನೀರಿನ ಪೂರೈಕೆ, ಗ್ರಾಮೀಣ ಭಾಗಕ್ಕೆ ಸೂಕ್ತ ಸಾರಿಗೆ ವ್ಯವಸ್ಥೆ, ವಸತಿ ರಹಿತರಿಗೆ ವಸತಿ ಸೌಲಭ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೈಗೊಳ್ಳುವ ಕನಸು ಹೊಂದಿದ್ದು, ಪಕ್ಷವು ನನಗೆ ಟಿಕೆಟ್ ನೀಡುವ ವಿಶ್ವಾಸವಿದೆ ಎಂದು.ಈ ಸಂದರ್ಭದಲ್ಲಿ ಹೇಳಿದರು. ಈ ಸಂದರ್ಭದಲ್ಲಿ ಆಗಮಿಸಿದ್ದ ಬಿಜೆಪಿಯ ಮುಖಂಡರುಗಳು ಹಾಗೂ ಸದಸ್ಯರು  ಮಹಿಳೆಯರು ಸೇರಿದಂತೆ ಉಪಸ್ಥಿತರಿದ್ದರು