ಹಡಗಲಿಯಲ್ಲಿ ಚುನಾವಣಾ ಪ್ರಚಾರ ಮಾಡಿದ ಸಿದ್ದರಾಮಯ್ಯ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಏ.26: ವಿಜಯನಗರ ಜಿಲ್ಲೆ ಹೂವಿನಹಡಗಲಿಯಲ್ಲಿ ಇಂದು ಮಧ್ಯಾಹ್ನ  ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣಾ ಪ್ರಚಾರ ನಡೆಸಿದರು.
ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದ ಸಿದ್ದರಾಮಯ್ಯ ಅವರು. ಕಾಂಗ್ರೆಸ್ ಅಭ್ಯರ್ಥಿ ಪಿ.ಟಿ.ಪರಮೇಶ್ವರ ನಾಯಕ್ ಪರ ಪ್ರಚಾರಕ್ಕೆ ಆಗಮಿಸಿದ್ದರು.
ಹಡಗಲಿ ಪಟ್ಟಾಣದ ತಾಲೂಕು ಕ್ರಿಡಾಂಗಣದಲ್ಲಿ ಆಯೋಜಿಸಿದ್ದ  ಕಾಂಗ್ರೆಸ್ ಸಮಾವೇಶವನ್ನು ಸಿದ್ದರಾಮಯ್ಯ ಉದ್ಘಾಟಿಸಿ ಸಭೆಯಲ್ಲಿ ಪಾಲ್ಗೊಂಡಿದ್ದ  ಸಾವಿರಾರೂ ಜನರನ್ನು ಉದ್ದೇಶಿಸಿ ಮಾತನಾಡಿ. ರಾಜ್ಯದಲ್ಲಿ ಸರ್ವ ಸಮುದಾಯಗಳ ಅಭಿವೃದ್ಧಿ ಮತ್ತು ಭ್ರಷ್ಟಾಚಾರ ವಿಲ್ಲದೆ ಬಡ ಜನರ ಸಂಕಷ್ಟಗಳಿಗೆ ಸ್ಪಂದಿಸಲು ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಎಂದರು.
ಸಮಾವೇಶದಲ್ಲಿ ಕಾಂಗ್ರೆಸ್  ಪಕ್ಷದ ಹಿರಿಯ ಮುಖಂಡ ಅಲ್ಲಂ ವೀರಭದ್ರಪ್ಪ,  ಅಭ್ಯರ್ಥಿ ಪಿ.ಟಿ ಪರಮೇಶ್ವರ್ ನಾಯಕ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.
ಇಂದು ಹಣಕೊಟ್ಟು ಜನರನ್ನು ಸಮಾವೇಶಕ್ಕೆ ಕರೆಸಿದ್ದರೂ  ಹಡಗಲಿಯಲ್ಲಿಯೇ  ಬಹುತೇಖ ಕುರುಬ ಸಮುದಾಯ ಬಿಜೆಪಿ ಅಭ್ಯರ್ಥಿ ಪರ ನಿಂತಿರುವುದು ಸಿದ್ದರಾಮಯ್ಯ ಅವರ ಗಮನಕ್ಕೆ ಸಮುದಾಯದ ಮುಖಂಡರು ತಂದಿದ್ದಾರಂತೆ. ಈ ಬಾರಿ ಪಿಟಿಪಿಯನ್ನು ಹಣಿಯಲು ವಿರೋಧಿಗಳೆಲ್ಲ ಒಂದಾಗಿರುವುದು ತಳಮಳ ಉಂಟು ಮಾಡಿದೆಯಂತೆ.