ಹಡಗಲಿ ಆಯ್ಕೆ

ಬಾದಾಮಿ, ಮೇ21: ಅಖಿಲ ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘ(ರಿ)ದ ತಾಲೂಕಾ ಘಟದ ನೂತನ ಅಧ್ಯಕ್ಷರಾಗಿ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಕಲಾ ಕೆ. ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಗರದ ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕಿ ಡಿ.ಬಿ.ಹಡಗಲಿ ಇವರನ್ನು ನಗರದ ತಹಶೀಲದಾರ ಕಚೇರಿಯ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ನಿರ್ಮಲಾ ಪತ್ತಾರ, ಜಿಲ್ಲಾಧ್ಯಕ್ಷೆ ಗಿರಿಜಾ ವಾಬನ್ನವರ, ಪ್ರಧಾನ ಕಾರ್ಯದರ್ಶಿ ಆರ್.ಆರ್.ಡಿಗ್ಗಿ, ಪದಾಧಿಕಾರಿ ಬಿ.ಎಂ.ನಾಟೇಕರ್ ಹಾಜರಿದ್ದರು.