ಹಡಗಿಲ್ ಹಾರುತಿ ಸರಕಾರಿ ಪ್ರೌಢಶಾಲೆ ಮಕ್ಕಳು ತಾಲ್ಲೂಕ ಮಟ್ಟಕ್ಕೆ ಆಯ್ಕೆ

ಕಲಬುರಗಿ,ಆ.28-ಈಚೆಗೆ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಹಡಗಿಲ್ ಹಾರುತಿ ಸರಕಾರಿ ಪ್ರೌಢ ಶಾಲೆಯ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತಿಯ ಮತ್ತು ತೃತೀಯ ಸ್ಥಾನಗಳನ್ನು ಪಡೆದು ತಾಲ್ಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
400 ಮೀಟರ್ ಓಟದಲ್ಲಿ ಗೌರಮ್ಮ ನೀಲಪ್ಪ ಪ್ರಥಮ ಸ್ಥಾನ, 800 ಮೀಟರ್ ಓಟದಲ್ಲಿ ಗುಂಡಮ್ಮ ಪೂಜಾರಿ ಪ್ರಥಮ ಸ್ಥಾನ, ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ, ಜಾವಲಿನ್ ಎಸೆತದಲ್ಲಿ ತೃತೀಯ ಸ್ಥಾನ, ಲಕ್ಷ್ಮೀ ಶಿವಲಿಂಗಪ್ಪ ತ್ರಿವಿಧ ಜಿಗಿತ ದ್ವಿತೀಯ ಸ್ಥಾನ, 800 ಮೀಟರ್ ಓಟದಲ್ಲಿ ನಾಗಮ್ಮ ಹಣಮಂತ ತೃತೀಯ ಸ್ಥಾನ, 3000 ಮೀಟರ್ ಓಟದಲ್ಲಿ ಕಾವೇರಿ ರಾಠೋಡ ದ್ವಿತೀಯ ಸ್ಥಾನ, ಬಾಲಕರ ವಿಭಾಗದಲ್ಲಿ ಮಲ್ಲಿಕಾರ್ಜುನ ನೀಲಕಂಠಪ್ಪ ತ್ರಿವಿಧ ಜಿಗಿತ ಪ್ರಥಮ ಸ್ಥಾನ, ಆದಿತ್ಯ ಸುಭಾಷ್ ತೃತೀಯ ಸ್ಥಾನ, ಸ್ವಸ್ತಿಕ್ ಬಿರಾದಾರ್ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ, ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ, 3000 ಮೀಟರ್ ಓಟದಲ್ಲಿ ಗಣೇಶ್ ತಳವಾರ್ ತೃತೀಯಾ ಸ್ಥಾನ ಪಡೆದು ತಾಲೂಕ್ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಕ್ಕಳ ಈ ಸಾಧನೆಗೆ ಶಾಲೆಯ ಮುಖ್ಯ ಗುರುಗಳು, ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀದೇವಿ ರಾಜಶೇಖರ್ ಕಟ್ಟಿಮನಿ ಹಾಗೂ ಎಸ್. ಡಿ. ಎಮ್. ಸಿ ಅಧ್ಯಕ್ಷರು ಹಾಗೂ ಸದಸ್ಯರು ಹರ್ಷ ವ್ಯಕ್ತ ಪಡಿಸಿದ್ದಾರೆ.