ಹಡಪದ ಅಪ್ಪಣ್ಣ ಜಯಂತಿ ಆಚರಣೆ

(ಸಂಜೆವಾಣಿ ವಾರ್ತೆ)
ವಿಜಯಪುರ:ಜು.4: ಹಡಪದ ಅಪ್ಪಣ್ಣನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಇವರು “ಹಡಪದ” ಸಮಾಜದವರಾಗಿದ್ದು ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಇವರು ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ “ಅನುಭವ ಮಂಟಪದಲ್ಲಿ” ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರದು.
ಇವರು ಸುಮಾರು 250ಕ್ಕೂ ಹೆಚ್ಚು ವಚನಗಳನ್ನು ಅಪ್ಪಣ್ಣ ಪ್ರಿಯ ಚನ್ನಬಸವಣ್ಣ ಎಂಬ ಅಂಕಿತನಾಮದಿಂದ ರಚಿಸಿದ್ದಾರೆ. ಅವರ ವಚನಗಳು ಅಜ್ಞಾನಿಗಳಿಗೆ ಸನ್ಮಾರ್ಗವನ್ನು ತೊ?ರಿಸುವ ದಾರಿದೀಪಗಳಾದರೆ, ಶೊ?ಷಕವರ್ಗಕ್ಕೆ ಚಾಟಿ ಏಟಿನಂತಿವೆ. ಜುಲೈ-3 ರಂದು ಅವರ ಜಯಂತಿ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಅನುಶ್ರೀ-ಶ್ರೀನಿಧಿ ಬಂಡೆ ಅವರು ಹಡಪದ ಅಪ್ಪಣ್ಣ ವೇಷಧಾರಿಗಳಾಗಿ ಜಯಂತಿಯನ್ನು ಆಚರಿಸಿದರು.