ಹಣಕಾಸು ಮಾರುಕಟ್ಟೆಯಲ್ಲಿ ವಿಫುಲ ಅವಕಾಶಗಳು

ಸಂಜೆವಾಣಿ ವಾರ್ತೆ

ದಾವಣಗೆರೆ.ಫೆ.೨೬: ಭಾರತದ ಆರ್ಥಿಕತೆಯ ಬೆಳವಣಿಗೆಯಲ್ಲಿ ಹಾಗೂ ಜಿ ಡಿ ಪಿ ಯ ಅಭಿವೃದ್ಧಿಯಲ್ಲಿ ಹಣಕಾಸು ಮಾರುಕಟ್ಟೆಯ ಪಾತ್ರ ಬಹುಮುಖ್ಯವಾದದ್ದು ಎಂದು ಜೈನ್ ಎಂ ಬಿ ಎ ಕಾಲೇಜಿನ ಪ್ರಾಧ್ಯಾಪಕರಾದ ಪ್ರಕಾಶ್ ವಾಲ್ಬಾಲ್ಕರ್  ತಿಳಿಸಿದರು.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ಶಾಶ್ಟ್ರ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಶೇರು ಮಾರುಕಟ್ಟೆ ಮತ್ತು ಉದ್ಯೋಗಾವಕಾಶಗಳು ಕುರಿತ ಒಂದು ದಿನದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು.ಪ್ರತಿಯೊಬ್ಬ ವಿದ್ಯಾರ್ಥಿಯೂ ಆರ್ಥಿಕತೆಯ ಬಗ್ಗೆ ತಿಳಿದುಕೊಳ್ಳುವುದು ಅವಶ್ಯಕವಾಗಿದೆ ಅದರಲ್ಲೂ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಹಣಕಾಸು ಮಾರುಕಟ್ಟೆ ವಹಿಸುವ ಪಾತ್ರವೂ ಬಹು ಮುಖ್ಯವಾದದ್ದು ಅದರ ಜ್ಞಾನ ಪಡೆದುಕೊಳ್ಳುವುದು ವಿದ್ಯಾರ್ಥಿಗಳಿಗೆ ಅವಶ್ಯಕತೆ ಇದೆ. ಕಾರ್ಪೊರೇಟ್ ಕಂಪನಿಗಳು ಪ್ರತಿದಿನ ಲಾಭಗಳಿಸುತ್ತವೆ ಎನ್ನುವುದಾದರೆ ಅದು ಒಟ್ಟಾರೆಯಾಗಿ ಭಾರತದ ಆರ್ಥಿಕ ಪರಿಸ್ಥಿತಿ ಅಭಿವೃದ್ಧಿಯತ್ತ ಸಾಗುತ್ತಿದೆ ಎಂಬುದರ ಸಂಕೇತ ಅದರ ಜ್ಞಾನ ಪಡೆದುಕೊಳ್ಳುವುದು ಮುಖ್ಯ ಎಂದು ಹೇಳಿದರು.ವಿದ್ಯಾರ್ಥಿಗಳಿಗೆ ಷೇರು ಮಾರುಕಟ್ಟೆಯ ಪಾತ್ರ ಹಾಗೂ ಅದರಲ್ಲಿರುವ ಉದ್ಯೋಗಾವಕಾಶ ಕುರಿತು ಸಂಪೂರ್ಣ ಮಾಹಿತಿಯನ್ನು ವಿವರವಾಗಿ ನೀಡಿದರು.ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ನಾಗರಾಜ್ ಆರ್ ಸಿ ರವರು ವಿದ್ಯಾರ್ಥಿಗಳು ಪ್ರಾಯೋಗಿಕ  ಜ್ಞಾನವನ್ನು ಪಡೆದುಕೊಳ್ಳಲು ಕಾಲೇಜಿನಲ್ಲಿ ಈ ತರಹದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಅದರ ಉಪಯೋಗಗಳನ್ನು ವಿದ್ಯಾರ್ಥಿಗಳು ಪಡೆದು ಮುಂದೆ ತಮ್ಮ ಜೀವನಕ್ಕೆ ಅನುಕೂಲವಾಗುವ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಹೇಳಿದರು.ಪ್ಲೇಸ್ಮೆಂಟ್ ಸೆಲ್  ಸಂಚಾಲಕರಾದ ವೆಂಕಟೇಶ್ ಬಾಬು ರವರು ಮಾತನಾಡುತ್ತಾ ಹಣಕಾಸು ಮಾರುಕಟ್ಟೆಯು ವ್ಯಕ್ತಿಗೆ ಜ್ಞಾನದ ಜೊತೆಗೆ ಜೀವನವನ್ನು ಕಟ್ಟಿಕೊಡುವಂತಹ ಕ್ಷೇತ್ರವಾಗಿ ಬೆಳೆದಿದೆ ವಿದ್ಯಾರ್ಥಿಗಳು ಅದರಲ್ಲಿ ದೊರೆಯಬಹುದಾದಉದ್ಯೋಗಾವಕಾಶಗಳು ಹೆಚ್ಚು ಅದಕ್ಕೆ ಬೇಕಾದ ಜ್ಞಾನವನ್ನು ಸಂಪಾದಿಸಿಕೊಂಡರೆ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ವಿಭಾಗದ ಎಲ್ಲಾ ಅಧ್ಯಾಪಕರು ಭಾಗವಹಿಸಿದ್ದರು.