ಹಣಮಂತ ಬೋಧನಕರ್ ರನ್ನು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನ ಮಾಡಿ

ಕಲಬುರಗಿ:ಜು.14: ದಲಿತ ಮುಖಂಡ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಹಣಮಂತ ಬೋದನಕರ್ ಅವರಿಗೆ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಯುವ ಕಾಂಗ್ರೆಸ್ ಮುಖಂಡ ಸೂರ್ಯಕಾಂತ ಬೋಧನಕರ್ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಹಣಮಂತ ಬೋಧನಕರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಸುಮಾರು ವರ್ಷಗಳಿಂದ ಸಕ್ರಿಯ ಕಾರ್ಯಕರ್ತರಾಗಿ ಹಾಗೂ ಪಕ್ಷದ ನಿಷ್ಠಾವಂತ ನಾಯಕನಾಗಿ ಕೆಲಸವನ್ನು ಮಾಡಿದ್ದಾರೆ.ಮತ್ತು ಪಕ್ಷದ ಅಭ್ಯರ್ಥಿ ನೂತನ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ್ದಾರೆ.ವಿಶೇಷವಾಗಿ ದಕ್ಷಿಣ ಮತಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಯ ಗೆಲುವಿಗಾಗಿ ತುಂಬಾ ಶ್ರಮಿಸಿದ್ದಾರೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆದ ನಂತರ ಅವರಿಗೆ ಪಕ್ಷದಲ್ಲಿ ಯಾವುದೇ ಉನ್ನತ ಸ್ಥಾನವನ್ನು ನೀಡಿರುವುದಿಲ್ಲ.ಆದ್ದರಿಂದ ದಲಿತ ಮುಖಂಡ ಹಾಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹಣಮಂತ ಬೋಧನಕರ್ ಅವರಿಗೆ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಬೇಕೆಂದು ಅವರು ಕಾಂಗ್ರೆಸ್ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಬ್ದುಲ್ ರಜಾಕ, ಪಾಶಾಮಿಯಾ, ಹಾಜಿ ಅಬ್ದುಲ್ ಕರೀಂ, ಶೇಕ ಬಾಬಾ,ಶರಣು ಬಿ.ಪೂಜಾರಿ, ರಾಜಕುಮಾರ ಎಸ್ ಪೂಜಾರಿ, ಸಿದ್ದಲಿಂಗ ಹಿರೇಕುರುಬ,ರಾಕೇಶ ನಾಟೀಕಾರ ಸೇರಿದಂತೆ ಇತರರು ಇದ್ದರು.