ಹಣ್ಣು ಹಂಪಲು ವಿತರಣೆ


ಸಂಜೆವಾಣಿ ವಾರ್ತೆ
ಕಂಪ್ಲಿ,ಆ.05 ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಅವರ 40ನೇ ಹುಟ್ಟು ಹಬ್ಬದ ಅಂಗವಾಗಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು ಹಾಗು ಕಾರ್ಯಕರ್ತರು ಶುಕ್ರವಾರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿಯರಿಗೆ, ರೋಗಿಗಳಿಗೆ ಹಣ್ಣು, ಹಾಲು, ಬ್ರೆಡ್ ವಿತರಿಸಿದರು.
 ಬಿಜೆಪಿ ಕಂಪ್ಲಿ ಕ್ಷೇತ್ರ ಅಧ್ಯಕ್ಷ ಅಳ್ಳಳ್ಳಿ ವೀರೇಶ್ ಮಾತನಾಡಿ, ಟಿ.ಎಚ್.ಸುರೇಶಬಾಬು ಅವರು ತಮ್ಮ 10 ವರ್ಷಗಳ ಅಧಿಕಾರದ ಅವಧಿಯಲ್ಲಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸಿದ್ದಾರೆ. ಅವರ ಜನಪರ ಕಾಳಜಿ ಮತ್ತು ಜನಪ್ರಿಯ ಕಾರ್ಯಕ್ರಮಗಳಿಂದಾಗಿ ಕಂಪ್ಲಿ ಕ್ಷೇತ್ರದ ಚುಕ್ಕಾಣಿಯನ್ನು ಮತ್ತೊಮ್ಮೆ ಹಿಡಿಯಲಿದ್ದಾರೆ ಎಂದು ಹೇಳಿದರು.
 ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಜಿ.ಸುಧಾಕರ್, ಪುರಸಭೆ ಸದಸ್ಯರಾದ ಡಾ.ವಿ.ಎಲ್.ಬಾಬು, ಎಸ್.ಎಂ.ನಾಗರಾಜಸ್ವಾಮಿ, ಎನ್.ರಾಮಾಂಜನೇಯಲು, ಡಾ.ಮಲ್ಲೇಶಪ್ಪ, ಡಾ.ವೆಂಕಟೇಶ್ ಸಿ.ಭರಮಕ್ಕನವರ್, ಎಸ್.ರಾಘವೇಂದ್ರ, ಎನ್.ಮರಿಯಪ್ಪ, ಕೋಟೇ ಮೇಗಳ ಹನುಮಂತಪ್ಪ, ಡಿ.ವೀರಣ್ಣ, ಬಿಜೆಪಿ ಮಹಿಳಾ ಕಾರ್ಯಕರ್ತರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.  
  05ಕಂಪ್ಲಿ01 ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಅವರ 40ನೇ ಹುಟ್ಟು ಹಬ್ಬದ ಅಂಗವಾಗಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು ಹಾಗು ಕಾರ್ಯಕರ್ತರು ಶುಕ್ರವಾರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿಯರಿಗೆ, ರೋಗಿಗಳಿಗೆ ಹಣ್ಣು, ಹಾಲು, ಬ್ರೆಡ್ ವಿತರಿಸಿದರು.

Attachments area