ಹತೋಟಿಯತ್ತ 2ನೇ ಅಲೆ

ನವದೆಹಲಿ, ಮೇ ೩೦- ದೇಶದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಆರ್ಭಟಿಸಿದ ಕೊರೊನಾ ೨ನೇ ಅಲೆ ಈಗ ಸ್ವಲ್ಪ ಮಟ್ಟಿಗೆ ಹತೋಟಿಗೆ ಬಂದಿದ್ದು, ಕಳೆದ ಕೆಲ ದಿನಗಳಿಂದ ಸೋಂಕು ಇಳಿಮುಖವಾಗುತ್ತಿದ್ದು, ಕಳೆದ ೨೪ ಗಂಟೆಯಲ್ಲಿ ಸೋಂಕಿತರ ಸಂಖ್ಯೆಂiiಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಹಾಗೆಯೇ ಸೋಂಕಿನಿಂದ ಚೇತರಿಸಿಕೊಂಡಿರುವವರ ಪ್ರಮಾಣವು ಹೆಚ್ಚಿದೆ.
ಮಹಾರಾಷ್ಟ್ರ, ಗುಜರಾತ್, ದೆಹಲಿ, ರಾಜಾಸ್ತಾನ್, ಪಂಜಾಬ್, ಹಿಮಾಚಲ ಪ್ರದೇಶ, ಉತ್ತರಾಕಾಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗಿರುವುದರಿಂದ ದೇಶದಲ್ಲಿ ಸೋಂಕು ಪ್ರಮಾಣ ತಗ್ಗಿದೆ.
ಸೋಂಕಿನ ಇಳಿಕೆಯಿಂದ ಕೊರೊನಾ ೨ನೇ ಅಲೆ ಶಾಂತವಾಗುವತ್ತ ಸಾಗಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬರುವ ಆಶಾಭಾವನೆ ಮೂಡಿದೆ.
ದೇಶದಲ್ಲಿ ಕಳೆದ ೨೪ ಗಂಟೆಗಳಲ್ಲಿ ೧,೬೫,೫೩೩ ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು ,೩,೪೬೦ ಮಂದಿ ಮೃತಪಟ್ಟಿದ್ದಾರೆ.ಅಲ್ಲದೆ ೨,೭೬,೩೦೯ ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಇಂದು ಬೆಳಿಗ್ಗೆ ೮ ಗಂಟೆತನಕ ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸಂಖ್ಯೆ ಸೇರಿದಂತೆ ಇಲ್ಲಿಯವರೆಗೂ ೨,೭೮,೯೪,೮೦೦ ಸೋಂಕು ಏರಿಕೆಯಾಗಿದೆ. ಜೊತೆಗೆ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ ೨,೫೪,೫೪,೩೨೦ ಹೆಚ್ಚಳವಾಗಿದೆ.
ದೇಶದಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ೩,೨೫,೯೭೨ ಏರಿಕೆಯಾಗಿದೆ ಎಂದು ಸಚಿವಾಲಯ ತನ್ನ ಮಾಹಿ
ತಿಯಲ್ಲಿ ತಿಳಿಸಿದೆ.
ಕಳೆದ ಹಲವು ದಿನಗಳಿಂದ ಮಹಾರಾಷ್ಟ್ರದಲ್ಲಿ ಗುಜರಾತ್,ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋಂಕು ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸಂಖ್ಯೆ ಕುಸಿತ ಕಂಡಿದೆ.
ಸೋಂಕು ಮತ್ತಷ್ಟು ಕಡಿಮೆ ಮಾಡುವ ನಿಟ್ಟಿನಲ್ಲಿ ಹಲವು ರಾಜ್ಯಗಳು ಲಾಕ್ಡೌನ್ ಸೇರಿದಂತೆ ಮತ್ತಿತರ ಬಿಗಿ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಇಳಿಮುಖವಾಗುತ್ತಿದೆ.
ಕುಸಿದ ಸಕ್ರಿಯ ಪ್ರಕರಣ:
ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಚೇತರಿಕೆ ಪ್ರಮಾಣ ಹೆಚ್ಚುತ್ತಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ
ಸದ್ಯ ದೇಶದಲ್ಲಿ ೨೧,೧೪,೫೦೮ ಮಂದಿಯಲ್ಲಿ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ

೨೧.೨೦ ಕೋಟಿ ಜನರಿಗೆ ಲಸಿಕೆ
ದೇಶದಲ್ಲಿ ಕೊರೊನಾ ಸೋಂಕಿನ ಲಸಿಕೆ ಅಭಾವವಿರುವ ಹಿನ್ನೆಲೆಯಲ್ಲಿ ಇದುವರೆಗೂ ೨೦ ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ಹಾಕಲಾಗಿದೆ.
ನಿನ್ನೆ ಸಂಜೆತನಕ ೨೧,೨೦,೬೬,೬೧೪ ಜನರಿಗೆ ಲಸಿಕೆ ಹಾಕಲಾಗಿದೆ ಈ ಸಂಖ್ಯೆಯನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚು ಮಾಡುವುದಾಗಿ ತಿಳಿಸಿದೆ.