ಹತ್ಯೆ ಖಂಡಿಸಿ ಪ್ರತಿಭಟನೆ

ಹುಬ್ಬಳ್ಳಿ,ಏ20: ನೇಹಾ ಹಿರೇಮಠ ಕೊಲೆಯ ಪ್ರಕರಣ ಖಂಡಿಸಿ ಹುಬ್ಬಳ್ಳಿಯಲ್ಲಿಂದು ಜಯ ಕರ್ನಾಟಕ ಸಂಘಟನೆಯಿಂದ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು..

ನೇಹಾ ಹಿರೇಮಠ ಕೊಲೆ ಮಾಡಿರುವ ಆರೋಪಿಗೆ ಕೂಡಲೇ ಗಲ್ಲು ಶಿಕ್ಷೆ ವಿಧಿಸಬೇಕು. ಅಲ್ಲದೇ ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಭದ್ರತೆ ನೀಡುವ ಕಾರ್ಯವನ್ನು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆ ಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಹಾಗೂ ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿ ಆಕ್ರೋಶ ವ್ಯಕ್ತಪಡಿಸಿದರು.