ಹತ್ರಾಸ ಅತ್ಯಾಚಾರ ಪ್ರಕರಣ ಖಂಡಿಸಿ ಅಖಿಲ ಭಾರತ ಪ್ರತಿಭಟನಾ ದಿನ

ಕಲಬುರಗಿ,ಅ.29- ಉತ್ತರ ಪ್ರದೇಶದ ಹತ್ರಾಸ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ರಚಿಸುವುದು ಸೇರಿದಂತೆ ಪ್ರಮುಖ ಬೇಡಿಕೆಗಳಿಗೆ ಒತ್ತಾಯಿಸಿ ಬೃಹತ ಪ್ರತಿಭಟನಾ ಪ್ರದರ್ಶನ ಕೈಗೊಳ್ಳಲಾಯಿತು.
ಹತ್ರಾಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದು ಇಂದಿಗೆ ಒಂದು ತಿಂಗಳಾಗಿದ್ದು, ಈ ದಿನವನ್ನು ಅಖಿಲ ಭಾರತ ಪ್ರತಿಭಟನಾ ದಿನವನ್ನಾಗಿ ಆಚರಿಸಲು ಕೆರೆ ನೀಡಿದ ಕೇಂದ್ರ ಸಂಘಟನೆಗೆ ಬೆಂಬಲಿಸಿ ಅಖಿಲ ಭಾತರ ಮಹಿಳಾ ಸಾಂಸ್ಕøತಿಕ ಸಂಘಟನೆ (ಎಐಎಂಎಸ್‍ಎಸ್) ನೇತೃತ್ವದಲ್ಲಿಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಮಹಿಳೆಯರ ಮತ್ತು ಮಕ್ಕಳ ಮೆಲಿನ ಅತ್ಯಾಚಾರ ತಡೆಯಬೇಕು, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು, ಅತ್ಯಾಚಾರಿಗಳ ರಕ್ಷಣೆಯಲ್ಲಿ ತೊಡಗಿರುವ ಉತ್ತರ ಪ್ರದೇಶದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಪ್ರಮುಖ ಬೇಡಿಕೆಯ ಮನವಿಯನ್ನು ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಗುಂಡಮ್ಮ ಮಡಿವಾಳ ಜಿಲ್ಲಾ ಕಾರ್ಯದರ್ಶಿ ಗೌರಮ್ಮ ಸಿ.ಕೆ ಸೇರಿದಂತೆ ಹಲವರು ಭಾಗವಹಿಸಿದ್ದರು.