
ಕಾಳಗಿ.ಜು.26: ಪಟ್ಟಣದ ಸರಕಾರಿ ಉರ್ದು ಶಾಲೆಯಿಂದ ಜಗಜ್ಯೋತಿ ಕಾಲೇಜ ವರೆಗೆ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಹಳ್ಳಕೊಳ್ಳಗಳಂತಾಗುತ್ತದೆ. ಇದರಿಂದ ಜನರು, ವಾಹನ ಸವಾರರು, ವಿದ್ಯಾರ್ಥಿಗಳು, ಸಾರ್ವಜನಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಇಲ್ಲಿನ ನಿವಾಸಿಗಳು ಪಟ್ಟಣ ಪಂಚಾಯಿತಿ ಎಲ್ಲಾ ಆಸ್ತಿ ತೆರಿಗೆ ಪಾವತಿಸುತ್ತಾರೆ. ಆದರೆ ಉತ್ತಮ ರಸ್ತೆ ಚರಂಡಿ ಮತ್ತಿತರ ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಚರಂಡಿ ನೀರು ಒಂದು ಕಡೆ ನಿಂತು ರಸ್ತೆ ಮೇಲೆ ಹರಿಯುತ್ತದೆ. ಇದರಿಂದ ರೈತರು,ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಓಡಾಡಲು ತುಂಬಾ ತೊಂದರೆಯಾಗಿದೆ. ಈ ಕುರಿತು ಪಟ್ಟಣ ಪಂಚಾಯತ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಕೊಟ್ಟರು ಪ್ರಯೋಜನವಾಗಿಲ್ಲ ಎಂಬುದು ನಿವಾಸಿಗಳು ದೂರುತ್ತಾರೆ.
ಕೂಡಲೇ ರಸ್ತೆ ಅಭಿವೃದ್ಧಿಪಡಿಸಿ ಚರಂಡಿಗಳನ್ನು ನಿರ್ಮಿಸಬೇಕು. ಇಲ್ಲದಿದ್ದರೆ ಪಟ್ಟಣ ಪಂಚಾಯತ ಮುಂದೆ ಹೋರಟ ಮಾಡಬೇಕಾಗುತ್ತದೆ ಎಂದು ವಾರ್ಡಿನ ಸ್ಥಳೀಯರು ಆಗ್ರಹಿಸಿದರು.