
ರಾಜಾ ದಶರಥನು ಪುತ್ರಪ್ರಾಪ್ತಿಗಾಗಿ `ಪುತ್ರಕಾಮೇಷ್ಟಿ ಯಜ್ಞ’ವನ್ನು ಮಾಡಿದನು. ಆಗ ಯಜ್ಞದಿಂದ ಅಗ್ನಿದೇವನು ಪ್ರತ್ಯಕ್ಷನಾಗಿ ದಶರಥನ ರಾಣಿಯರಿಗಾಗಿ ಪಾಯಸ (ಖೀರು, ಯಜ್ಞದಲ್ಲಿನ ಉಳಿದ ಪ್ರಸಾದ) ವನ್ನು ನೀಡಿದನು. ದಶರಥನ ರಾಣಿಯರಂತೆಯೇ ತಪಸ್ಸನ್ನು ಮಾಡುವ ಅಂಜನೀಗೂ ಪಾಯಸವು ದೊರಕಿತ್ತು ಮತ್ತು ಅದರಿಂದಲೇ ಮಾರುತಿಯ ಜನ್ಮವಾಗಿತ್ತು. ಆ ದಿನ ಚೈತ್ರ ಪೌರ್ಣಿಮೆಯಾಗಿತ್ತು. ಈ ದಿನವನ್ನು `ಹನುಮಾನ್ ಜಯಂತಿ’ ಎಂದು ಆಚರಿಸುತ್ತಾರೆ. ವಾಲ್ಮೀಕಿ ರಾಮಾಯಣದಲ್ಲಿ (ಕಿಷ್ಕಿಂಧಾಕಾAಡ, ಅಧ್ಯಾಯ 66)ಕೆಲವು ಪಂಚಾಂಗಗಳ ಪ್ರಕಾರ ಆಶ್ವಯುಜ ಕೃಷ್ಣ ಚತುರ್ದಶಿಯು ಹನುಮಂತನ ಜನ್ಮತಿಥಿಯಾಗಿದೆ ಮತ್ತು ಇನ್ನೂ ಕೆಲವರ ಪ್ರಕಾರ ಚೈತ್ರ ಹುಣ್ಣಿಮೆಯು ಹನುಮಂತನ ಜನ್ಮತಿಥಿಯಾಗಿದೆ. ಕರ್ನಾಟಕದಲ್ಲಿ ಹನುಮಂತ ಜಯಂತಿಯನ್ನು ಚೈತ್ರ ಹುಣ್ಣಿಮೆಯಂದು ಆಚರಿಸುತ್ತಾರೆ. ಹನುಮಂತ ಜಯಂತಿಯAದು ಹನುಮಂತ ತತ್ವ ಎಂದಿಗಿAತ 1000 ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಈ ತಿಥಿಗೆ `ಶ್ರೀ ಹನುಮತೇ ನಮಃ ನಾಮಜಪ, ಹಾಗೆಯೇ ಹನುಮಂತನ ಇತರ ಉಪಾಸನೆಯನ್ನು ಭಾವಪೂರ್ಣವಾಗಿ ಮಾಡುವುದರಿಂದ ಹನುಮಂತತತ್ತ÷್ವದ ಲಾಭವು ಹೆಚ್ಚೆಚ್ಚು ದೊರೆಯಲು ಸಹಾಯವಾಗುತ್ತದೆ. ಈ ದಿನ ಹನುಮಂತನ ದೇವಸ್ಥಾನದಲ್ಲಿ ಸೂರ್ಯೋದಯಕ್ಕೆ ಮೊದಲೇ ಕೀರ್ತನೆಯು (ಹರಿಕಥೆ) ಪ್ರಾರಂಭವಾಗುತ್ತದೆ. ಸೂರ್ಯೋದಯಕ್ಕೆ ಕೀರ್ತನೆ ಮುಕ್ತಾಯಗೊಳ್ಳುತ್ತದೆ ಮತ್ತು ಹನುಮಂತನ ಜನ್ಮವಾಗುತ್ತದೆ. ನಂತರ ಹನುಮಂತನ ಮೂರ್ತಿಯನ್ನು ಪೂಜಿಸುತ್ತಾರೆ ಮತ್ತು ಎಲ್ಲರಿಗೂ ಪ್ರಸಾದವನ್ನು ಕೊಡುತ್ತಾರೆ.ಹುಟ್ಟಿದ ಕೂಡಲೇ ಮಾರುತಿಯು ಸೂರ್ಯನನ್ನು ನುಂಗಲು ಹಾರಿದನು ಎಂಬ ಕಥೆಯಿದೆ, ಇದರಿಂದ ವಾಯುಪುತ್ರ (ಅಂದರೆ ವಾಯುತತ್ತ÷್ವದಿಂದ ನಿರ್ಮಾಣವಾದ) ಮಾರುತಿಯು ಸೂರ್ಯನನ್ನು (ತೇಜತತ್ತ÷್ವ ವನ್ನು) ಜಯಿಸುವವನಾಗಿದ್ದನು ಎನ್ನುವುದು ತಿಳಿಯುತ್ತದೆ. ಪೃಥ್ವಿ, ಆಪ, ತೇಜ, ವಾಯು ಮತ್ತು ಆಕಾಶ ಈ ತತ್ತ÷್ವಗಳಲ್ಲಿ ವಾಯುತತ್ತ÷್ವವು ತೇಜತತ್ತ÷್ವಕ್ಕಿಂತಲೂ ಹೆಚ್ಚು ಸೂಕ್ಷ÷್ಮ, ಅಂದರೆ ಹೆಚ್ಚು ಶಕ್ತಿಯುಳ್ಳದ್ದಾಗಿದೆ.ಎಲ್ಲ ದೇವತೆಗಳಲ್ಲಿ ಕೇವಲ ಮಾರುತಿಗೆ ಮಾತ್ರ ಕೆಟ್ಟ ಶಕ್ತಿಗಳು ತೊಂದರೆಗಳನ್ನು ಕೊಡುವುದಿಲ್ಲ. ಲಂಕೆಯಲ್ಲಿ ಲಕ್ಷಗಟ್ಟಲೆ ರಾಕ್ಷಸರಿದ್ದರು, ಆದರೆ ಅವರಿಗೆ ಮಾರುತಿಗೆ ತೊಂದರೆ ಕೊಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಮಾರುತಿಗೆ `ಭೂತಗಳ ಸ್ವಾಮಿ’ ಎನ್ನುತ್ತಾರೆ. ಯಾರನ್ನಾದರೂ ಭೂತವು ಹಿಡಿದಿದ್ದರೆ, ಆ ವ್ಯಕ್ತಿಯನ್ನು ಮಾರುತಿಯ ದೇವಸ್ಥಾನಕ್ಕೆ ಒಯ್ಯುತ್ತಾರೆ ಅಥವಾ ಮಾರುತಿ ಸ್ತೋತ್ರವನ್ನು ಪಠಿಸುತ್ತಾರೆ. ಇದರಿಂದ ಅವನ ತೊಂದರೆಗಳು ಕಡಿಮೆಯಾಗದಿದ್ದರೆ ಅವನ ಮೇಲಿನಿಂದ ತೆಂಗಿನಕಾಯಿಯನ್ನು ನಿವಾಳಿಸಿ ಮಾರುತಿಯ ದೇವಸ್ಥಾನದಲ್ಲಿ ಒಡೆಯುತ್ತಾರೆ. ಅವನ ಮೇಲಿನಿಂದ ತೆಂಗಿನಕಾಯಿಯನ್ನು ನಿವಾಳಿಸುವುದರಿಂದ ಅವನಲ್ಲಿದ್ದ ಕೆಟ್ಟ ಶಕ್ತಿಯು ತೆಂಗಿನಕಾಯಿಯಲ್ಲಿ ಪ್ರವೇಶಿಸುತ್ತದೆ ಮತ್ತು ಆ ತೆಂಗಿನಕಾಯಿಯನ್ನು ಮಾರುತಿಯ ದೇವಸ್ಥಾನದಲ್ಲಿ ಒಡೆಯುವುದರಿಂದ ಅದರಲ್ಲಿರುವ ಕೆಟ್ಟ ಶಕ್ತಿಯು ಮಾರುತಿಯ ಸಾಮರ್ಥ್ಯದಿಂದ ನಾಶವಾಗುತ್ತದೆ. ನಂತರ ಆ ತೆಂಗಿನಕಾಯಿಯನ್ನು ವಿಸರ್ಜನೆ ಮಾಡುತ್ತಾರೆ. ರಾಮ-ರಾವಣರ ಯುದ್ಧದಲ್ಲಿ ಬ್ರಹ್ಮಾಸ್ತçದಿಂದ ರಾಮ, ಲಕ್ಷ÷್ಮಣ, ಸುಗ್ರೀವ ಇತ್ಯಾದಿ ವೀರರು ಮೂರ್ಛೆ ಹೋದಾಗ ಜಾಂಬವAತನು ಹನುಮಂತನ ಪರಾಕ್ರಮದ ಬಗ್ಗೆ ಹೀಗೆ ವರ್ಣನೆ ಮಾಡಿದ್ದನು ? ವಾನರಶ್ರೇಷ್ಠ ಹನುಮಂತನು ಜೀವಂತವಾಗಿದ್ದಾಗ ಎಲ್ಲ ಸೈನ್ಯವು ಮರಣ ಹೊಂದಿದರೂ ಅವರು ಮರಣ ಹೊಂದದAತೆ ಆಗಿದೆ; ಆದರೆ ಹನುಮಂತನು ಪ್ರಾಣತ್ಯಾಗ ಮಾಡಿದರೆ ನಾವು ಜೀವಂತವಾಗಿದ್ದರೂ ಮೃತರಾದಂತೆಯೇ ಆಗಿದೆ. ಹನುಮಂತನು ಜಂಬು-ಮಾಲಿ, ಅಕ್ಷ, ಧೂಮ್ರಾಕ್ಷ, ನಿಕುಂಭ ಇತ್ಯಾದಿ ಬಲಾಢ್ಯ ವೀರರನ್ನು ನಾಶ ಮಾಡಿದನು. ಅವನು ರಾವಣನನ್ನೂ ಮೂರ್ಛಿತಗೊಳಿಸಿದನು. ಸಮುದ್ರ ಉಡ್ಡಾಣ, ಲಂಕೆಯ ದಹನ, ದ್ರೋಣಗಿರಿ ಪರ್ವತವನ್ನು ತರುವುದು ಇತ್ಯಾದಿ ಘಟನೆಗಳು ಹನುಮಂತನ ಶೌರ್ಯದ ಪ್ರತೀಕವಾಗಿವೆ. ಸೀತೆಯನ್ನು ಶೋಧಿಸಲು ರಾವಣನ ಅಂತಃಪುರದೊಳಗೆ ಪ್ರವೇಶಿಸಿದ ಮಾರುತಿಯ ಮನಃಸ್ಥಿತಿಯು ಅವನ ಉಚ್ಚಚಾರಿತ್ರ÷್ಯದ ನಿದರ್ಶಕವಾಗಿದೆ. ಅವನು ಸ್ವತಃ ಹೇಳುತ್ತಾನೆ, `ನಿಶ್ಚಿಂತೆಯಿAದ ಬಿದ್ದಿರುವ ಈ ಎಲ್ಲ ರಾವಣನ ಸ್ತಿçÃಯರನ್ನು ನಾನು ಹೀಗೆ ನೋಡಿರುವುದು ನಿಜ, ಆದರೆ ಅವರನ್ನು ನೋಡಿ ನನ್ನ ಮನಸ್ಸಿನಲ್ಲಿ ವಿಕಾರವುಂಟಾಗಲಿಲ್ಲ’ (ಶ್ರೀವಾಲ್ಮೀಕಿರಾಮಾಯಣ, ಸುಂದರಕಾAಡ, ಅಧ್ಯಾಯ 11, ಶ್ಲೋಕ 42, 43) ಅನೇಕ ಸಂತರೂ ಈ ಜಿತೇಂದ್ರಿಯ ಮಾರುತಿಯ ಪೂಜೆಯನ್ನು ಮಾಡಿ ಅವನ ಆದರ್ಶವನ್ನು ಸಮಾಜದ ಮುಂದೆ ಇಟ್ಟಿದ್ದಾರೆ.