ಹನೂರು ಪಪಂ: ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರ ಸ್ವೀಕಾರ

ಹನೂರು, ನ.12: ಪ.ಪಂ.ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಅಧಿಕಾರವನ್ನು ವಹಿಸಿಕೊಂಡರು.
ನ.7 ರಂದು ಪ.ಪಂ.ಅಧ್ಯಕ್ಷರು, ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ 12ನೇ ವಾರ್ಡ್‍ನ ಚಂದ್ರಮ್ಮ ಅಧ್ಯಕ್ಷರಾಗಿ ಹಾಗೂ ಕಾಂಗ್ರೇಸ್ ಪಕ್ಷದ 3ನೇ ವಾರ್ಡ್‍ನ್ ಹರೀಶ್‍ಕುಮಾರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ಹಿನ್ನಲೆಯಲ್ಲಿ ಇಂದು ಪ.ಪಂ.ಮುಖ್ಯಾಧಿಕಾರಿ ಮೂರ್ತಿ ಹಾಗೂ ಸದಸ್ಯರುಗಳ ಉಪಸ್ಥಿತಿಯಲ್ಲಿ ಅಧಿಕಾರ ವಹಿಸಿಕೊಂಡರು.
ಈ ವೇಳೆ ಅಧ್ಯಕ್ಷೆ ಚಂದ್ರಮ್ಮ ಮಾತನಾಡಿ, ಪ.ಪಂ.ವ್ಯಾಪ್ತಿಯ ಎಲ್ಲಾ ವಾರ್ಡ್‍ಗಳ ಸದಸ್ಯರ ಸಹಕಾರ ಪಡೆದು ಪ.ಪಂ.ಅಭಿವೃದ್ಧಿಗೆ ಶ್ರಮಿಸಲಾಗುವುದು. ಪ್ರಮುಖವಾಗಿ ಕುಡಿಯುವ ನೀರು, ಸ್ವಚ್ಛತೆ, ಬೀದಿ ದೀಪಗಳು ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಒತ್ತನ್ನು ನೀಡಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಪ.ಪಂ. ವತಿಯಿಂದ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸೇರಿದಂತೆ ಎಲ್ಲಾ ಸದಸ್ಯರುಗಳನ್ನು ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪ.ಪಂ.ಮುಖ್ಯಾಧಿಕಾರಿ ಮೂರ್ತಿ, ಸದಸ್ಯರುಗಳಾದ ಆನಂದ್‍ಕುಮಾರ್, ಸಂಪತ್‍ಕುಮಾರ್, ಗಿರೀಶ್, ಮಹೇಶ್‍ನಾಯಕ, ಸೋಮಶೇಖರ್, ಮಹೇಶ್, ಮುಮ್ತಾಜ್ ಭಾನು, ಮಂಜುಳ, ರೂಪ, ಪವಿತ್ರ, ಉಪಸ್ಥಿತರಿದ್ದರು.