ಹಬೋಹಳ್ಳಿ : ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ


 ಸಂಜೆವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ. ಏ.18 ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್. ಭೀಮನಾಯ್ಕ್ ಈ ಬಾರಿ ಗೆಲ್ಲುವ ಮೂಲಕ ಹ್ಯಾಟ್ರಿಕ್  ಬಾರಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಹೆಗ್ಡೆಳ್ ಶ್ರೀನಿವಾಸ ಶೆಟ್ಟಿ ಹೇಳಿದರು.
 ಪಟ್ಟಣದ ತಮ್ಮ ಕಚೇರಿಯಲ್ಲಿ ಸೋಮವಾರ  ಕರೆದ ಪತ್ರಿಕಾಗೋಷ್ಠಿ ಯಲ್ಲಿ  ಮಾತನಾಡಿ ಶಾಸಕ ಎಸ್. ಭೀಮನಾಯ್ಕ್  ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ನೀರಾವರಿ ಶಿಕ್ಷಣ ಕುಡಿಯುವ ನೀರು, ರಸ್ತೆ ಸೇರಿದಂತೆ ಅನೇಕ ಜನಪರ ಕೆಲಸಗಳನ್ನು ಮಾಡಿದ್ದಾರೆ. ಮತದಾರರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಲು ಕುರಿಗಾಲ ಮೇಲೆ ನಿಂತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ನಮ್ಮ ಶಾಸಕರು ಸಚಿವರಾಗುತ್ತಾರೆ ನಾಳೆ 19 ನೇ ತಾರೀಕು ಕಾರ್ಯಕರ್ತರೊಂದಿಗೆ ಅದ್ದೂರಿಯಾಗಿ ನಾಮಪತ್ರ ಸಲ್ಲಿಸಲಾಗುವುದು ಎಂದರು.

One attachment • Scanned by Gmail