ಸಂಜೆವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ. ಏ.20 ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡುವಂತೆ ಎಂಸಿಸಿ ನೋಡಲ್ ಅಧಿಕಾರಿ ತಾ ಪಂ ಇ ಒ ಡಾ. ಜಿ. ಪರಮೇಶ್ವರಪ್ಪ ಪ್ರತಿಜ್ಞಾವಿಧಿ ಬೋಧಿಸಿದರು.
ತಾಲ್ಲೂಕಿನ ಹನಸಿ ಗ್ರಾಮ ಪಂಚಾಯತಿಯ ಹನಸಿ ಗ್ರಾಮದಲ್ಲಿ ಮ.ಗಾಂ.ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕೂಲಿಕಾರರನ್ನು ಉದ್ದೇಶಿಸಿ ಮಾತನಾಡಿದರು, ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಬೇಕು, ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಯಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮತದಾನ ಮಾಡಿ ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡುವಂತೆ ಹಾಗೂ ಮತದಾನದ ಪ್ರಮಾಣ ಹೆಚ್ಚಿಸಲು ಕ್ರಮವಹಿಸುವಂತೆ ಕೂಲಿ ಕಾರ್ಮಿಕರಿಗೆ ತಿಳಿಸಿದರು
ರಮೇಶ್ ಮಹಾಲಿಂಗಪುರ ಸಹಾಯಕ ನಿರ್ದೇಶಕರು (ಗ್ರಾಉ) ಸಭೆಯಲ್ಲಿ ಮಾತನಾಡಿ ಜನರು ಯಾವುದೇ ಆಮಿಷಗಳಿಗೆ ಬಲಿಯಾಗದೆ ಉತ್ತಮರನ್ನು ಆಯ್ಕೆ ಮಾಡಲು ಕಡ್ಡಾಯವಾಗಿ ಮತದಾನದ ಹಬ್ಬದಲ್ಲಿ ಪಾಲ್ಗೊಳ್ಳ ಬೇಕೆಂದು ಮನವಿ ಮಾಡಿದರು, ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದ್ದು, ಕೂಲಿಕಾರರಿಗೆ ಚಿಕಿತ್ಸೆಯನ್ನು, ತಪಾಸಣೆಯನ್ನು ಮಾಡಲಾಯಿತು.
ಹನಸಿ PHC ವೈಧ್ಯಾಧಿಕಾರಿ ಅರುಣ್ ಕುಮಾರ್, NRHM ಸಿಬ್ಬಂದಿಗಳು, ನರೇಗಾ ಸಿಬ್ಬಂದಿ ವರ್ಗದವರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, 1230 ಕ್ಕೂ ಹೆಚ್ಚಿನ ಕೂಲಿಕಾರರು ಹಾಜರಿದ್ದರು.