ಹಬೋಹಳ್ಳಿ :ಜಿಲ್ಲಾ ಮಟ್ಟದ ಕ್ವಿಜ್ ಸ್ಪರ್ಧೆಯಲ್ಲಿ ಪ್ರಥಮ


 ಸಂಜೆವಾಣಿ ವಾರ್ತೆ
 ಹಗರಿಬೊಮ್ಮನಹಳ್ಳಿ. ಜೂ.29 ಕೊಪ್ಪಳ ದಲ್ಲಿ ನಡೆದ RBI ವಿಜಯನಗರ ಜಿಲ್ಲಾ ಮಟ್ಟದ ಕ್ವಿಜ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ವಿಜ್ ಸ್ಪರ್ಧೆಗೆ ಆದರ್ಶ ವಿದ್ಯಾಲಯ ಶಾಲೆಯ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ
ವಿದ್ಯಾರ್ಥಿಗಳಾದ ಅಂಜುಮ್.ಬಿ 10 ನೇ ತರಗತಿ, ಮಿಥುನ ಕುಮಾರ್ ಜಿ.ವಿ 8 ನೇ ತರಗತಿ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಕ್ಕೆ   ಮಾರ್ಗದರ್ಶಿ ಶಿಕ್ಷಕ ಸಂತೋಷ ಕುಮಾರ್ ಓ ಸಮಾಜ ವಿಜ್ಞಾನ ಶಿಕ್ಷಕರು. ವಿದ್ಯಾರ್ಥಿಗಳಿಗೆ ಮತ್ತು ಮಾರ್ಗದರ್ಶಿ ಶಿಕ್ಷಕರಿಗೆ ಶಾಲೆಯ ಮುಖ್ಯ ಗುರುಗಳಾದ ಕೊಟ್ರೇಶಪ್ಪ .ಕೆ ಮತ್ತು ಎಲ್ಲಾ ಸಹಶಿಕ್ಷಕರು ಹಾಗೂ ಎಸ್.ಡಿ.ಎಮ್.ಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿ ಹಾಗೂ ರಾಜ್ಯ ಮಟ್ಟದ ಕ್ವಿಜ್ ಸ್ಪರ್ಧೆಗೆ ಶುಭ ಹಾರೈಸಿದರು.

One attachment • Scanned by Gmail