ಹರಪನಹಳ್ಳಿಯ ಮೊದಲ‌ ಮಹಿಳಾ ಶಾಸಕಿಲತಾ ಮಲ್ಲಿಕಾರ್ಜುನಗೆ ಆತ್ಮೀಯ ಗೌರವ

(ಸಂಜೆವಾಣಿ ವಾರ್ತೆ)ಬಳ್ಳಾರಿ, ಅ.25: ವಿಜಯನಗರ ಜಿಲ್ಲೆಯ ಹರಪನಹಳ್ಳಿ ವಿಧಾನ ಸಭಾ ಕ್ಷೇತ್ರದ ಮೊದಲ ಮಹಿಳಾ ಶಾಸಕಿ ಲತಾ ಮಲ್ಲಿಕಾರ್ಜುನ ಅವರಿಗೆ. ಸ್ವತಃ ಹರಪನಹಳ್ಳಿ ತಾಲೂಕಿನವರೇ ಆದ ಕರ್ನಾಟಕ ಇತಿಹಾಸ ಅಕಾಡೆಮಿಯ ಜಿಲ್ಲಾ ಅಧ್ಯಕ್ಷ ಟಿ.ಹೆಚ್.ಎಂ.ಬಸವರಾಜ್ ಅವರು ಶಾಸಕರ ಹರಪನಹಳ್ಳಿ ನಿವಾಸದಲ್ಲಿ ಸನ್ಮಾನಿಸಿ ಗೌರವಿಸಿದ್ದಾರೆ.ಈ ಸಂದರ್ಭದಲ್ಲಿ ತಂದೆ ದಿ.ಉಪ ಮುಖ್ಯ ಮಂತ್ರಿಯಾಗಿದ್ದ ಎಂ.ಪಿ.ಪ್ರಕಾಶ್ ಅವರ ರೀತಿಯಲ್ಲಿ ರಾಜಕೀಯದಲ್ಲೂ ಸಾಂಸ್ಕೃತಿಕ ಸೌರಭ ಬೀರುವಂತೆ ಆಶಯ ವ್ಯಕ್ತಪಡಿಸಿದ್ದಾರೆ ಟಿ.ಹೆಚ್.ಎಂ.ಬಸವರಾಜ್ ಅವರು.