ಹರಪನಹಳ್ಳಿ ಠಾಣೆ ಪಿಎಸ್‌ಐ ಪ್ರಕಾಶ್ ವರ್ಗಾವಣೆ

ಹರಪನಹಳ್ಳಿ.ಜ.೧೪: ಪೊಲೀಸ್ ಠಾಣೆ ಪಿಎಸ್‌ಐ ಸಿ.ಪ್ರಕಾಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.ಬಳ್ಳಾರಿಯ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ಪಿಎಸ್‌ಐ ಶಾಂತಮೂರ್ತಿ ಅವರನ್ನುಹರಪನಹಳ್ಳಿ ಠಾಣೆಗೆ ವರ್ಗಾವಣೆಗೊಳಿಸಿ ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕ ಬಿ.ಎಸ್.ಲೋಕೇಶ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಪಿಎಸ್‌ಐ ಸಿ.ಪ್ರಕಾಶ್ ಅವರುಕಳೆದ ಎರಡುವರೆ ವರ್ಷಗಳಿಂದ ಹರಪನಹಳ್ಳಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಅವರ ಸ್ಥಾನಕ್ಕೆ ಪಿಎಸ್‌ಐ ಶಾಂತಮೂರ್ತಿ ಅವರ ಸ್ವಂತ ಕೋರಿಕೆ ಮೇರೆಗೆ ವರ್ಗಾವಣೆ ಮೇರೆಗೆ ಶೀಘ್ರವೇ ಆಗಮಿಸಿ ಅಧಿಕಾರ ಸ್ವೀಕರಿಸಲಿದ್ದಾರೆ.ಕಳೆದ ಎರಡು ವರೆ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಪಿಎಸ್‌ಐ ಸಿ.ಪ್ರಕಾಶ್ ಅವರ ವರ್ಗಾವಣೆ ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ನಮೂದಿಸಲಾಗಿದೆ. ಅವರನ್ನು ಸದ್ಯ ಮುಂದಿನ ಸ್ಥಳ ನಿಯುಕ್ತಿಗೊಳಿಸುವವರೆಗೂ ಬಳ್ಳಾರಿ ವಲಯ ಕಚೇರಿಯಲ್ಲಿ ವರದಿ ಮಾಡುವಂತೆ ಸೂಚಿಸಲಾಗಿದೆ.