ಹರಪನಹಳ್ಳಿ, ಬಳ್ಳಾರಿ ಗ್ರಾಮೀಣ ಠಾಣೆ ಮೇಲ್ದರ್ಜೆಗೆ: ಎಸ್‌ಪಿ

ಹರಪನಹಳ್ಳಿ ಸೆ 17 : ಹರಪನಹಳ್ಳಿ ಮತ್ತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಗಳನ್ನು ಶೀಘ್ರ ಮೇಲ್ದರ್ಜೆಗೇರಿಸಲಾಗುವುದು ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬ್ಬಂದಿ ಸಂಖ್ಯೆ ಹೆಚ್ಚಳ ಮಾಡಿದರೆ ಸುವ್ಯವಸ್ಥೆ ಕಾಪಾಡಲು ಸಹಕಾರಿ ಆಗುತ್ತದೆ’ ಎಂದು ಹೇಳಿದರು.
ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಒಂದು ವರ್ಷದಲ್ಲಿ ಅಪಘಾತದಲ್ಲಿ 400 ಮಂದಿ ಮೃತಪಟ್ಟಿದ್ದಾರೆ. ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ರಸ್ತೆ ಸುರಕ್ಷತೆ ಕುರಿತು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುವುದು ಜಿಲ್ಲೆಯಲ್ಲಿ ಹೆಲ್ಮೆಟ್ ಕಡ್ಡಾಯಗೊಳಿಸಲಾಗುವುದು ಎಂದು ತಿಳಿಸಿದರು.
ಪೋಲೀಸರು -ಜನರ ಮಧ್ಯೆ ಅಂತರ ಜಾಸ್ತಿಯಾಗುತ್ತದೆ ಎಂಬ ಆಕ್ರೋಶವಿದೆ. ಆ ಅಂತರ ಕಡಿಮೆ ಮಾಡಲು ತಾಂತ್ರಿಕತೆಯನ್ನು ಬಳಕೆ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ನೆಟ್‌ವರ್ಕ್‌ ಕಲ್ಪಿಸಿಕೊಂಡು ಜನಸ್ನೇಹಿಯಾಗಿ ಪೋಲೀಸರು ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳುತ್ತೇವೆ’ ಎಂದರು.
ಜಿಲ್ಲೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಹಾಗೂ ಗಾಂಜಾ ಸೊಪ್ಪು ಬೆಳೆಯುವುದನ್ನು ಪತ್ತೆ ಹಚ್ಚಲಾಗುತ್ತದೆ. ಈಗಾಗಲೇ ಗಾಂಜಾಗೆ ಸಂಬಂಧ ಪಟ್ಟಂತೆ 7 ಪ್ರಕರಣಗಳನ್ನು ದಾಖಲಿಸಲಾಗಿದೆ ಹಾಗೂ ಗಾಂಜಾ ಪತ್ತೆಗೆ ವಿಶೇಷ ತಂಡ ರಚನೆ ಮಾಡಿ ಕೊಂಬಿಂಗ್ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನೆ, ಪಿಎಸ್ಐ ಸಿ.ಪ್ರಕಾಶ್ ಇತರರು ಇದ್ದರು