ಹರಪನಹಳ್ಳಿ; ಯುವ ಕಾಂಗ್ರೆಸ್ ಪ್ರತಿಭಟನೆ

ಹರಪನಹಳ್ಳಿ.ಮಾ.೨೬: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ರದ್ದುಗೊಳಿಸಿರುವ ಕ್ರಮ ಖಂಡಿಸಿ ತಾಲ್ಲೂಕು ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಿದರು.ಪಟ್ಟಣದ ಹಿರೆಕೆರೆ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಪ್ರದರ್ಶಿಸಿ ದಿಕ್ಕಾರ ಕೂಗಿ ಕೇಂಧ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಅಧಿಕಾರದ ಅಹಂಕಾರದಲ್ಲಿರುವ ಬಿಜೆಪಿ ಸರ್ಕಾರ ಸಾಮಾನ್ಯ ಜನತೆಗೆ ಅನ್ಯಾಯ ಮಾಡುತ್ತಿದೆ. ಆಡಳಿತ ವೈಫಲ್ಯಗಳ ವಿರುದ್ಧ ಮಾತನಾಡುವ ವಿರೋಧ ಪಕ್ಷದ ನಾಯಕರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೇಳಿ, ಕೇಸು ಹಾಕಿಸಲಾಗುತ್ತದೆ. ಅದರಂತೆ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯ ಸ್ಥಾನ ರದ್ದು ಮಾಡಿದ್ದಾರೆ ಎಂದು ತಾಲ್ಲೂಕು ಮತ್ತೂರು ಬಸವರಾಜ್ ಆರೋಪಿಸಿದರು.ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮತ್ತೂರು ಬಸವರಾಜ್, ಜಿಲ್ಲಾ ಕಾರ್ಯದರ್ಶಿ ಶಮಿವುಲ್ಲಾ, ರಾಜ್ಯ ವಕ್ತಾರ ಪ್ರಸಾದ್ ಕವಾಡಿ, ಮುಖಂಡರಾದ ಎಂ.ವಿ. ಕೃಷ್ಣಕಾಂತ್, ರಿಯಾಜ್, ಜೀಷಾನ್, ಸೇವಾದಳ ಅಧ್ಯಕ್ಷ ಗುರುಸಿದ್ದಪ್ಪ, ಹನುಮಂತಪ್ಪ, ಚಿರಂಜೀವಿ, ಭೀಮಪ್ಪ ಇತರರಿದ್ದರು.