ಹರಸೂರ ಗ್ರಾಮ ಪಂಚಾಯಿತಿ:ಕಾಲ್ನಡಿಗೆ ಜಾಥಾ ಮೂಲಕ ಮತದಾನ ಜಾಗೃತಿ

ಕಲಬುರಗಿ,ಮೇ.05:ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಕಲಬುರಗಿ ತಾಲೂಕಿನ ಹರಸೂರ ಗ್ರಾಮದ ಗ್ರಾಮ ಪಂಚಾಯಿತಿಯಿಂದ ಸರ್ಕಾರಿ ಪ್ರೌಢಶಾಲೆಯವರೆಗೆ ಕಾಲ್ನಡಿಗೆ ಜಾಥಾವನ್ನು ಏರ್ಪಡಿಸುವುದರ ಮೂಲಕ ಸಾರ್ವಜನಿಕರಲ್ಲಿ ಮತದಾನದ ಕುರಿತು ಶುಕ್ರವಾರ ಜಾಗೃತಿ ಮೂಡಿಸಲಾಯಿತು.

ವಿಧಾನಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಮತದಾರರು 2023ರ ಮೇ 10ರಂದು ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಇದೇ ಸಂದರ್ಭದಲ್ಲಿ ಮತದಾನದ ಮಹತ್ವವನ್ನು ತಿಳಿಸಲಾಯಿತು.

ನಂತರ ಹರಸೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾರತ ನಕ್ಷೆ ಹಾಗೂ ಕರ್ನಾಟಕ ನಕ್ಷೆಯನ್ನು ಬಿಡಿಸಿ ಅದರ ಸುತ್ತುವರೆದು ಮತದಾನ ಕುರಿತು ಎಲ್ಲರಿಗೂ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಈ ಸಂದರ್ಭದಲ್ಲಿ ಎಂ.ಸಿ.ಸಿ. ನೋಡಲ್ ಅಧಿಕಾರಿಗಳು ಹಾಗೂ ಕಲಬುರಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ಕೌಲಗಿ, ಉದ್ಯೋಗ ಖಾತ್ರಿ ಯೋಜನೆ (ಉಖಾಯೋ) ಸಹಾಯಕ ನಿರ್ದೇಶಕರು, ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನರೇಗಾ ಇ.ಐ.ಸಿ. ಸಂಯೋಜಕರು ಹಾಗೂ ಹರಸೂರ ಗ್ರಾಮಸ್ಥರು ಉಪಸ್ಥಿತರಿದ್ದರು.