ಹರಿಯಾಣ: ಸಿಎಂ ಸ್ಥಾನಕ್ಕೆ ಖಟ್ಟರ್ ರಾಜೀನಾಮೆ

ಚಂಡಿಗಢ,ಮಾ.೧೨- ಲೋಕಸಭೆ ಚುನಾವಣೆಗೂ ಮುನ್ನ ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ-ಜೆಜೆಪಿ ಮೈತ್ರಿ ಮುರಿದು ಬಿದ್ದ ಹಿನ್ನೆಲೆಯಲ್ಲಿ ಹರಿಯಾಣ ಮುಖ್ಯಮಂತ್ರಿ ಸ್ಥಾನಕ್ಕೆ ಮನೋಹರ್ ಲಾಲ್ ಖಟ್ಟರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಪಕ್ಷೇತರ ಶಾಸಕರ ಬೆಂಬಲದೊಂದಿಗೆ ಇಂದು ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸಚಿವ ಸಂಪುಟ ಇಂದು ಸಾಮೂಹಿಕವಾಗಿ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ರಾಜೀನಾಮೆ ನೀಡಿದ ಅಲ್ಲಿಯೇ ಮನೋಹರ್ ಲಾಲ್ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ರಾಜಭವನದ ಸಭಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆ ನಡೆದಿದೆಹರಿಯಾಣ ಸರ್ಕಾರದಲ್ಲಿ ಬಿಜೆಪಿ ಮತ್ತು ಜೆಜೆಪಿ ನಡುವೆ ನಡೆಯುತ್ತಿರುವ ಬಿಕ್ಕಟ್ಟಿನ ನಡುವೆ, ಸಿಎಂ ಮನೋಹರ್ ಲಾಲ್ ಖಟ್ಟರ್ ಅವರು ಬಿಜೆಪಿ ಮತ್ತು ಸರ್ಕಾರದ ಬೆಂಬಲಿತ ಸ್ವತಂತ್ರ ಶಾಸಕರ ಸಭೆ ನಡೆಸಿದರುಬಿಜೆಪಿ ಕೇಂದ್ರ ವೀಕ್ಷಕರಾದ ಅರ್ಜುನ್ ಮುಂಡಾ, ತರುಣ್ ಚಹ ಅವರು ಮನೋಹರ್ ಲಾಲ್ ಖಟ್ಟರ್ ಅವರ ಜೊತೆ ಮುಂದಿನ ನಡೆ ಕುರಿತು ನಿರ್ಧರಿಸಿದರು ಎಂದು ಮೂಲಗಳು ತಿಳಿಸಿವೆ.ಈ ವೇಳೆ ಮಾತನಾಡಿದ ಹರ್ಯಾಣ ಬಿಜೆಪಿ ಶಾಸಕ ಕ್ರಿಶನ್ ಲಾಲ್ ಮಿದ್ಧಾ ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಮನೋಹರ್ ಲಾಲ್ ಖಟ್ಟರ್ ಮತ್ತೊಮ್ಮೆ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಿದ್ದಾರೆ.ಜೆಜೆಪಿ-ಬಿಜೆಪಿ ಮೈತ್ರಿ ಏಕೆ ಮುರಿದುಬಿದ್ದಿದೆ ಎಂಬುದಕ್ಕೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಪಕ್ಷದ ಹೈಕಮಾಂಡ್‌ನ ವೀಕ್ಷಕರು ಬರುತ್ತಿದ್ದಾರೆ ಮತ್ತು ಅವರು ನಮ್ಮನ್ನು ಕೇಳಿದರೆ, ನಮ್ಮ ಬೆಂಬಲ ಮನೋಹರ್ ಲಾಲ್ ಖಟ್ಟರ್ ಅವರಿಗೆ ಇದೆ ಮತ್ತು ಅವರು ಮೂರನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಾರೆ ಮತ್ತು ನಂತರ ವಿಧಾನಸಭೆ ಚುನಾವಣೆ ನಂತರ ನಾಲ್ಕನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ