ಹರಿಹರ ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷರಾಗಿ ವೀರಭದ್ರಪ್ಪ

ಹರಿಹರ ಮಾ 23;  ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೀರಭದ್ರಪ್ಪ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ 
ತಾಲ್ಲೂಕು ಪಂಚಾಯಿತಿಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ 5 ಜೆಡಿಎಸ್ ಪಕ್ಷ ದ ಅಭ್ಯರ್ಥಿಗಳ 7 ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು 4 ಒಟ್ಟು 15 ಸದಸ್ಯರುಗಳಿದ್ದು ಇಲ್ಲಿವರೆಗೂ ಒಡಂಬಡಿಕೆಯಂತೆ ಬಿಜೆಪಿ ಜೆಡಿಎಸ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅಧ್ಯಕ್ಷರುಗಳಾಗಿಯೇ ಅಧಿಕಾರ ನಡೆಸಿಕೊಂಡು ಬಂದಿದ್ದು ಒಡಂಬಡಿಕೆಯಂತೆ ಇಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೀರಭದ್ರಪ್ಪ ಅವಿರೋಧವಾಗಿ ಆಯ್ಕೆಯಾಗಿ ಅಧ್ಯಕ್ಷರಾಗಿ ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಉಪಾಧ್ಯಕ್ಷರಾಗಿ ಶಾಂತಮ್ಮ ಗದಿಗೆಪ್ಪ ಆಯ್ಕೆಯಾಗಿದ್ದು ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ದಾವಣಗೆರೆ ಉಪ ವಿಭಾಗದ ಅಧಿಕಾರಿ ಹಾಗೂ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಮಮತಾ ಹೊಸಗೌಡರ್ ಘೋಷಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿ ಜಿ ಡಿ ಗಂಗಾಧರ್ .ಮಾಜಿ ತಾಪಂ ಅಧ್ಯಕ್ಷೆ ಶ್ರೀದೇವಿ ಮಂಜಪ್ಪ .  ಜಯಮ್ಮ .ವಿಶಾಲಾಕ್ಷಿ ಕೊಟ್ರೇಶಪ್ಪ .ಲಕ್ಷ್ಮಿ ಮಹಾಂತೇಶ್ ಕೊಟ್ರಪ್ಪಗೌಡ  ಸದಸ್ಯರುಗಳು ಜೆಡಿಎಸ್ ಕಾಂಗ್ರೆಸ್ ಬಿಜೆಪಿ ಪಕ್ಷದ ಅಭಿಮಾನಿಗಳು ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು