
ಬೆಂಗಳೂರು,ಮೇ.೧- ಕಳೆದ ಎರಡು ಮೂರು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆ, ಇಂದು ಕೂಡ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇಂದು ಬಹುತೇಕ ಇಡೀ ದಿನ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯ ಹೊತ್ತಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಹ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ. ಚಿತ್ರದುರ್ಗ, ಬಳ್ಳಾರಿ, ಚಾಮರಾಜನಗರ, ರಾಯಚೂರು, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ ೨ ಗಂಟೆಯಲ್ಲಿ ಭಾರೀ ಮಳೆಯಾಗಲಿದೆ. ಗಾಳಿಯೊಂದಿಗೆ ಮಳೆಯಾಗುವ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.