ಹಲವು ರಾಜ್ಯಗಳಲ್ಲಿ ಮಳೆ: ರೆಡ್ ಅಲರ್ಟ್

ನವದೆಹಲಿ,ಮೇ.೨೧-ಹಲವು ರಾಜ್ಯಗಳಲ್ಲಿ ಬಿರುಗಾಳಿ, ಗುಡುಗು, ಮಿಂಚು ಸಹಿತ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮೇ ೨೩ರವರೆಗೆ ಕೇರಳದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹೀಗಾಗಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ಭಾರೀ ಪೂರ್ವ ಮುಂಗಾರು ಮಳೆಯಾಗುತ್ತಿದೆ.
ಕೇರಳ ರಾಜ್ಯ ರಾಜಧಾನಿ ತಿರುವನಂತಪುರಂ ಸೇರಿದಂತೆ ಕೇರಳದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಪತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ ಮತ್ತು ಅಲಪ್ಪುಳಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ ಕೆಲವು ದಿನಗಳಲ್ಲಿ ಕೇರಳದಲ್ಲಿ ಗಂಟೆಗೆ ೩೦ ರಿಂದ ೪೦ ಕಿಮೀ ವೇಗದಲ್ಲಿ ಗಾಳಿ ಸಹಿತ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ತಿರುವನಂತಪುರಂ, ಕೊಲ್ಲಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂಗಳಲ್ಲಿ ನಾಳೆಯವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಭೀತಿಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.
ತಮಿಳುನಾಡು, ಪುದುಚೇರಿ ಮತ್ತು ಕೇರಳ ಸೇರಿದಂತೆ ದಕ್ಷಿಣ ಪರ್ಯಾಯ ದ್ವೀಪದಲ್ಲಿ ಮೇ ೨೩ ರಂದು ಮತ್ತು ಕರ್ನಾಟಕದಲ್ಲಿ ನಾಳೆಯವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಛತ್ತೀಸ್‌ಗಢ, ಛತ್ತೀಸ್‌ಗಢ, ದಕ್ಷಿಣ ಕೊಂಕಣ ಮತ್ತು ಗೋವಾ ಮತ್ತು ದಕ್ಷಿಣ ಮಧ್ಯ ಮಹಾರಾಷ್ಟ್ರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಪಶ್ಚಿಮ ಹಿಮಾಲಯ, ವಿದರ್ಭ, ಮರಾಠವಾಡ ಮತ್ತು ದಕ್ಷಿಣ ಮಧ್ಯಪ್ರದೇಶದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ತಾಪಮಾನ ಮತ್ತಷ್ಟು ಹೆಚ್ಚಾಗಬಹುದು. ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಉಷ್ಣ ಅಲೆಯ ಪರಿಸ್ಥಿತಿಗಳು ಸಾಧ್ಯ.ಸ್ಕೈಮೆಟ್ ಹವಾಮಾನದ ಪ್ರಕಾರ, ಮುಂದಿನ ೨೪ ಗಂಟೆಗಳಲ್ಲಿ, ತೆಲಂಗಾಣ, ಕರ್ನಾಟಕ, ಒಳನಾಡಿನ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಲಕ್ಷದ್ವೀಪ, ಒಡಿಶಾ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಈಶಾನ್ಯ ಭಾಗಗಳಲ್ಲಿ ಲಘುವಾಗಿ ಮಧ್ಯಮ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.