ಹಲವೆಡೆ ಮೂರು ದಿನ ಮಳೆ

ಬೆಂಗಳೂರು,ನ.೧೮-ಮುಂದಿನ ೫ ದಿನಗಳ ಕಾಲ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನವೆಂಬರ್ ೨೨ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲೂ ಸಹ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಇಂದು ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗಲಿದೆ.
ಬೆಳಗಾವಿ, ಧಾರವಾಡ, ಗದಗ, ಚಾಮರಾಜನಗರ, ಚಿಕ್ಕಮಗಳೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಭಾರಿ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಚಿಕ್ಕಬಳ್ಳಾಪುರ, ಕೊಪ್ಪಳ, ಗದಗ, ಮೈಸೂರು, ವಿಜಯನಗರ, ಶಿವಮೊಗ್ಗ, ಕೋಲಾರ, ಕೊಡಗು, ಹಾಸನದಲ್ಲಿ ಉತ್ತಮ ಮಳೆಯಾಗಲಿದೆ.
ಚಳಿಯ ನಡುವೆಯೂ ಇಂದಿನಿಂದ ೫ ದಿನಗಳ ಕಾಲ ಮಳೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.ಕೆಲವು ಭಾಗದಲ್ಲಿ ಜಿಲ್ಲಾಡಳಿತಗಳಿಗೂ ಎಚ್ಚರಿಕೆ ನೀಡಲಾಗಿದೆ.
ನವೆಂಬರ್‌ನಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.